
ಬೆಂಗಳೂರು : ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ವ್ಯಕ್ತಿಯನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಶಾರ್ಜಾ ದಿಂದ ಭಾರತಕ್ಕೆ ಅಕ್ರಮವಾಗಿ 36 ವರ್ಷದ ಶಕೇನ್ ಶೇಕ್ ಒಳ ಉಡುಪಿನಲ್ಲಿ 26 ಲಕ್ಷ ಮೌಲ್ಯದ ಚಿನ್ನವನ್ನು ಸಾಗಣೆ ಮಾಡುತ್ತಿದ್ದ.
ಅಬುಧಾಬಿಯಿಂದ ಮುಂಬೈಗೆ ಬಂದು ಅಲ್ಲಿಂದ ಬೆಂಗಳೂರಿಗೆ ಬಂದಿದ್ದ ಶಕೇನ್ ಒಳ ಉಡುಪಿನಲ್ಲಿ ಚಿನ್ನದ ಪೌಡರ್ ಮತ್ತು ಪೇಸ್ಟ್ ಮಾಡಿ ತರುತ್ತಿದ್ದ. ಒಂದರ ಮೇಲೆ ಒಂದು ಒಳ ಉಡುಪು ಧರಿಸಿ ಅದರಲ್ಲಿ ಚಿನ್ನವನ್ನು ಇರಿಸಿಕೊಂಡಿದ್ದ.
ಅನುಮಾನಾಸ್ಪದವಾಗಿ ಕಂಡು ಬಂದ ಈತನನ್ನು ಪರಿಶೀಲನೆ ನಡೆಸಿದ ವೇಳೆ ಈತನ ಬಳಿ ಒಟ್ಟು 853 ಗ್ರಾಂ ಚಿನ್ನ ಪತ್ತೆಯಾಗಿದೆ. ಬಳಿಕ ಈತನ ಬಳಿ ಇದ್ದ ಚಿನ್ನವನ್ನು ಪೊಲೀಸರು ವಶಡಿಸಿಕೊಂಡಿದ್ದಾರೆ. ಅಲ್ಲದೇ ಆತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.