ಸರ್ಕಾರದ ಮುಖ್ಯ ಕಾರ್ಯದರ್ಶಿ ಭೇಟಿಯಾಗಿ ರಾಣಿ ಪ್ರಮೋದಾ ದೇವಿ ಚರ್ಚೆ

Published : Feb 28, 2018, 11:54 AM ISTUpdated : Apr 11, 2018, 12:45 PM IST
ಸರ್ಕಾರದ ಮುಖ್ಯ ಕಾರ್ಯದರ್ಶಿ ಭೇಟಿಯಾಗಿ ರಾಣಿ ಪ್ರಮೋದಾ ದೇವಿ ಚರ್ಚೆ

ಸಾರಾಂಶ

ಮೈಸೂರು ರಾಜವಂಶಸ್ಥರಾದ ಪ್ರಮೋದಾ ದೇವಿ ಅವರು ಮಂಗಳವಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರನ್ನು ಭೇಟಿ ಮಾಡಿ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿ ದರು.

ಬೆಂಗಳೂರು: ಮೈಸೂರು ರಾಜವಂಶಸ್ಥರಾದ ಪ್ರಮೋದಾ ದೇವಿ ಅವರು ಮಂಗಳವಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರನ್ನು ಭೇಟಿ ಮಾಡಿ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿ ದರು.

ಕೆಲವು ದಿನಗಳ ಹಿಂದೆ ಮಂಡ್ಯ ಜಿಲ್ಲೆಯ ಪಾಂಡವಪುರ ಅಮೃತ್ ಮಹಲ್ ಕಾವಲ್ ಸರ್ವೆ ನಂ.1ರ (ಬೇಬಿ ಬೆಟ್ಟ) 1500ಕ್ಕೂ ಹೆಚ್ಚು ಎಕರೆ ಭೂಮಿ ತಮ್ಮದು. ಈ ಜಮೀನನ್ನು ತಮ್ಮ ಖಾತೆಗೆ ವರ್ಗಾಯಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ಬೆಟ್ಟದಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ ತಡೆಯಬೇಕು ಎಂದು ಮನವಿ ಮಾಡಿ ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪ್ರಮೋದಾ ದೇವಿ ಅವರು ಪತ್ರ ಬರೆದಿದ್ದರು.

ಇದು ಮೈಸೂರು ಮಹಾಸಂಸ್ಥಾನದ ಜಾಗವಾಗಿದ್ದು, 1950 ರಿಂದ ಅನ್ವಯವಾಗುವಂತೆ ಮೈಸೂರು ರಾಜವಂಶಸ್ಥರ ಮಾಲೀಕತ್ವಕ್ಕೆ ಬಂದಿದೆ. ಇದಕ್ಕೆ ಪಾಂಡವಪುರ ತಹಸೀಲ್ದಾರ್ ಹಾಗೂ ಕಂದಾಯ ದಾಖಲೆಗಳ ಪ್ರಕಾರ ಮೈಸೂರು ವಂಶದ ಹೆಸರಿನಲ್ಲೇ ಆರ್‌ಟಿಸಿ ಇದೆ.

ಈ ಬಗ್ಗೆ ತಹಸೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳಿಗೂ ಪತ್ರ ಬರೆದಿದ್ದು, ನಮ್ಮ ಹೆಸರಿಗೆ ಖಾತೆ ಮಾಡಿಕೊಡಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದರು. ಇದೇ ವಿಷಯವಾಗಿ ಮಂಗಳ ವಾರ ಸಿಎಸ್ ಜೊತೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ ಮೈಸೂರಿನ ಅರಮನೆ ಎದುರಿನ ದೊಡ್ಡ ಕೆರೆ ಮೈ ದಾನದ ಮಾಲೀಕತ್ವದ ಹಕ್ಕನ್ನು ಕೂಡ ಅವರು ಮಂಡಿಸಿದ್ದಾರೆ ಎಂದು ತಿಳಿದುಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!