ಮಂಡ್ಯ ಈಗ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯಾಗಿ ಘೋಷಣೆ

Published : Oct 04, 2017, 04:39 PM ISTUpdated : Apr 11, 2018, 12:49 PM IST
ಮಂಡ್ಯ ಈಗ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯಾಗಿ ಘೋಷಣೆ

ಸಾರಾಂಶ

ಅ.02 ರಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಂಚಾಯತ್ ರಾಜ್ ಸಚಿವರು ಜಿಲ್ಲೆಯನ್ನು ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯನ್ನಾಗಿ ಘೋಷಣೆ ಮಾಡಿದ್ದು, ಮತ್ತಷ್ಟು  ಶೌಚಾಲಯಗಳ ನಿರ್ಮಾಣದ ಮೂಲಕ ಜಿಲ್ಲೆಯನ್ನು ಇನ್ನಷ್ಟು‌ ಅಭಿವೃದ್ಧಿ ಪಡಿಸುವುದಾಗಿ ಹೇಳಿದ್ದರು.

ಮಂಡ್ಯ(.04): ಸಕ್ಕರೆ ನಗರಿ ಮಂಡ್ಯ ಜಿಲ್ಲೆಯ ಮಕುಟಕ್ಕೆ ಮತ್ತೊಂದು ಪ್ರಶಸ್ತಿಯ ಗರಿ ಸೇರ್ಪಡೆಯಾಗಿದೆ.  ಮಂಡ್ಯ ಜಿಲ್ಲೆಯನ್ನು ಬಯಲು ಬಹಿರ್ದಸೆ ಮುಕ್ತ ಜಿಲ್ಲೆಯಾಗಿ ಘೋಷಣೆ ಮಾಡಲಾಗಿದೆ. ಈ ಮೂಲಕ ಸ್ವಚ್ಚ ಭಾರತ್ ಅಭಿಯಾನದಲ್ಲಿ ಮಂಡ್ಯ ಜಿಲ್ಲೆ ಬಯಲು ಮುಕ್ತ ಬಹಿರ್ದೆಸೆ ಜಿಲ್ಲೆಯಾಗಿ ರೂಪುಗೊಂಡಿದೆ.

ಈ ಕುರಿತಾಗಿ ಮಂಡ್ಯದ ಜಿ.ಪಂ. ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ‌ನಡೆಸಿದ ಜಿ.ಪಂ. ಸಿಇಒ ಶರತ್, ಜಿಲ್ಲೆಯ ಈ ಸಾಧನೆಗೆ ಕಾರಣಕರ್ತರಾದವರಿಗೆಲ್ಲಾ ಸಭಾಂಗಣದಲ್ಲಿ ಸನ್ಮಾನಿಸಿ ಅಭಿನಂಧನೆ ಸಲ್ಲಿಸಿದರು. ಜಿಲ್ಲೆಯಲ್ಲಿ 2012 ರ ಸಮೀಕ್ಷೆಯಂತೆ 234 ಗ್ರಾಮ ಪಂಚಾಯತಿಯಲ್ಲಿ ಶೇ 100 ರಷ್ಟು ಸಾಧನೆ ಮಾಡಿರುವುದಾಗಿ ತಿಳಿಸಿ 1, 97,739 ವೈಯಕ್ತಿಕ ಶೌಚಗೃಹ ನಿರ್ಮಿಸುವ ಮೂಲಕ ಸಾಧನೆ ಮಾಡಿದೆ ಎಂದರು.

ಅ.02 ರಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಂಚಾಯತ್ ರಾಜ್ ಸಚಿವರು ಜಿಲ್ಲೆಯನ್ನು ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯನ್ನಾಗಿ ಘೋಷಣೆ ಮಾಡಿದ್ದು, ಮತ್ತಷ್ಟು  ಶೌಚಾಲಯಗಳ ನಿರ್ಮಾಣದ ಮೂಲಕ ಜಿಲ್ಲೆಯನ್ನು ಇನ್ನಷ್ಟು‌ ಅಭಿವೃದ್ಧಿ ಪಡಿಸುವುದಾಗಿ ಹೇಳಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹಿಂದೂಗಳಿಗಿಂತ ಮುಸ್ಲಿಮರ ಮೇಲೆ ಹೆಚ್ಚು ಬಾಂಡ್: ಎಸ್‌ಡಿಪಿಐ ಆರೋಪಕ್ಕೆ ಅಂಕಿ-ಅಂಶ ಸಮೇತ ಕಮಿಷನರ್ ತಿರುಗೇಟು!
ಕರೆಂಟ್‌ ಅಕೌಂಟಲ್ಲಿ ₹150 ಕೋಟಿ ಅಲ್ಲ, ₹1 ಸಾವಿರ ಕೋಟಿ ವಹಿವಾಟು