
ಮಂಡ್ಯ(ಮಾ.14): ಮಾಜಿ ಸಿ.ಎಂ. ಎಸ್.ಎಂ.ಕೃಷ್ಣ ಬಿಜೆಪಿಗೆ ಸೇರ್ಪಡೆ ಯಾಗುತ್ತಿರುವ ಬೆನ್ನಲ್ಲೆ ಅವರ ಹಿಂಬಾಲಕರು ಕೂಡ ಬಿಜೆಪಿ ಸೇರ್ಪಡೆಯಾಗಿಲ್ಲಿದ್ದಾರೆಂಬ ಮಾಹಿತಿ ಈಗ ಮಂಡ್ಯ ಜಿಲ್ಲೆಯ ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನ ಮೂಡಿಸಿದೆ. ಇದಕ್ಕೆ ಕಾರಣವಾಗಿರೋದು ಮಂಡ್ಯದ ಮಾಜಿ ಸಂಸದೆ ಕು.ರಮ್ಯಾ ಕೂಡ ಬಿಜೆಪಿ ಸೇರಲಿದ್ದಾರೆಂಬ ಮಾಹಿತಿ ಈಗ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ.
ಕಳೆದ ಬಾರಿ ರಮ್ಯಾ ಮಂಡ್ಯದಲ್ಲಿ ಪಾಕಿಸ್ತಾನ ಪರ ಹೇಳಿಕೆ ಮತ್ತು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಾಂಗ್ರೆಸ್ ಪಕ್ಷ ಹೋರಾಟ ಮಾಡಿತ್ತು, RSS ಏನೂ ಮಾಡಿಲ್ಲ ಅಂತಾ ವಿವಾದಾತ್ಮಕ ಹೇಳಿಕೆ ನೀಡಿ ರಾಜ್ಯದ ಮತ್ತು ಮಂಡ್ಯದ ಬಿಜೆಪಿ ಕಾರ್ಯಕರ್ತರ ಆಕ್ರೋಶಕ್ಕೆ ತುತ್ತಾಗಿದ್ರು.
ಇಂದು ಸುದ್ದಿ ಮಾಧ್ಯಮದಲ್ಲಿ ರಮ್ಯಾ ಎಸ್ಎಂಕೆ.ಜೊತೆ ಬಿಜೆಪಿ ಸೇರಲಿದ್ದಾರೆಂಬ ಸುದ್ದಿ ಬರ್ತಿದ್ದಂತೆ ರಮ್ಯಾಯ ಬಿಜೆಪಿಗೆ ಬೇಡ ಅಂತ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಅಸಮಾಧಾನ ಹೊರ ಹಾಕಿದ್ದು, ಒಂದು ವೇಳೆ ಅವರನ್ನು ಪಕ್ಷಕ್ಕೆ ಕರೆ ತಂದರೆ ರಾಜ್ಯಾಧ್ಯಕ್ಷರ ಕಚೇರಿ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.