ಕಾವೇರಿ ಕೊಳ್ಳದಲ್ಲಿ ಭುಗಿಲೆದ್ದ ಆಕ್ರೋಶ

Published : Sep 19, 2016, 02:59 PM ISTUpdated : Apr 11, 2018, 01:04 PM IST
ಕಾವೇರಿ ಕೊಳ್ಳದಲ್ಲಿ ಭುಗಿಲೆದ್ದ ಆಕ್ರೋಶ

ಸಾರಾಂಶ

ಮಂಡ್ಯ (ಸೆ.19): ಕಾವೇರಿ ಮೇಲುಸ್ತುವಾರಿ ಸಮಿತಿ  ಸಭೆ ತಮಿಳುನಾಡಿಗೆ 10 ದಿನಗಳ ಕಾಲ ನಿತ್ಯ ಮೂರು ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶ ನೀಡಿರುವುದನ್ನು ಖಂಡಿಸಿ ಕಾವೇರಿ ಕೊಳ್ಳದಲ್ಲಿ  ಮತ್ತೆ  ಆಕ್ರೋಶ ಭುಗಿಲೆದ್ದಿದೆ.

ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ  ಸಾರ್ವಜನಿಕರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. 

ಶ್ರೀರಂಗಪಟ್ಟಣದಲ್ಲೂ ವಿವಿಧ ಸಂಘಟನೆಗಳ ಕಾರ್ಯಕರ್ತರು, ಮೈಸೂರು-ಬೆಂಗಳೂರು ಹೆದ್ದಾರಿ ತೆಡದು ಪ್ರತಿಭಟನೆ ನಡೆಸಿದ್ದಾರೆ.

ಯಾವುದೇ ಕಾರಣಕ್ಕೂ  ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದೆಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.  

ನಾಳೆ ಮದ್ಯ ನಿಷೇಧ:

ಮಂಡ್ಯ ಜಿಲ್ಲಾದ್ಯಂತ ನಾಳೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ನಾಡಿದ್ದು ಬೆಳಗ್ಗೆ 6ರವರೆಗೆ ಮದ್ಯ ಮಾರಾಟ ಮಾಡಲು ನಿಷೇಧ ಹೇರಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಜಿಯಾವುಲ್ಲಾ ಹೇಳಿದ್ದಾ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜಗತ್ತಿನಲ್ಲಿ ಅತಿಹೆಚ್ಚು ಮದ್ಯಪಾನ ಮಾಡುವ ದೇಶ ಯಾವುದು? ಭಾರತಕ್ಕೆ ಎಷ್ಟನೇ ಸ್ಥಾನ ಗೊತ್ತಾ?
ಸಿಎಂ ಹೇಳಿದ ಮೇಲೂ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಸಲ್ಲ: ಸಚಿವ ಸತೀಶ್‌ ಜಾರಕಿಹೊಳಿ