
ಮಂಗಳೂರು (ಮಾ. 04): ಮಡಿಕೇರಿಯಿಂದ ಬಿಜೆಪಿ ಹಮ್ಮಿಕೊಂಡಿರುವ ಮಂಗಳೂರು ಚಲೋ ಜನಸುರಕ್ಷಾ ಯಾತ್ರೆ ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸಲಿದೆ.
ಬೆಳಿಗ್ಗೆ ಹತ್ತು ಗಂಟೆಗೆ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಯಾತ್ರೆ ಸುಳ್ಯದಿಂದ ಪ್ರವೇಶ ಮುಂದುವರೆಯಲಿದ್ದು ಯಾತ್ರೆಯಲ್ಲಿ ಸಂಸದ ಪ್ರತಾಪ್ ಸಿಂಹ ಸುಳ್ಯ ಶಾಸಕ ಅಂಗಾರ, ಬಿಜೆಪಿ ಮುಖಂಡರು ಮತ್ತು ಸಾವಿರಾರು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಮಡಿಕೇರಿಯಿಂದ ಸುಳ್ಯ ತಲುಪಿರುವ ಯಾತ್ರೆ ಸುಳ್ಯದಲ್ಲಿ ಪಾದಯಾತ್ರೆ ಮೂಲಕ ಸಾಗಿ ಬಳಿಕ 12 ಗಂಟೆ ಸುಮಾರಿಗೆ ಸಮಾವೇಶ ನಡೆಯಲಿದೆ. ಸಮಾವೇಶ ನಡೆದ ಬಳಿಕ ಯಾತ್ರೆ ಪುತ್ತೂರಿನತ್ತ ಸಾಗಿ ಅಲ್ಲಿ ಪಾದಯಾತ್ರೆ ಮೂಲಕ ಸಂಚರಿಸಿ ಸಂಜೆ 5 ಗಂಟೆ ಸುಮಾರಿಗೆ ಪುತ್ತೂರಿನಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಬಳಿಕ ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಮಾ.5ರಂದು ಬಂಟ್ವಾಳ ತಾಲೂಕಿನ ಮಾಣಿಯಲ್ಲಿ ಮತ್ತೆ ಯಾತ್ರೆಗೆ ಚಾಲನೆ ದೊರೆಯಲಿದ್ದು, ಬಿ.ಸಿ.ರೋಡ್ ನಲ್ಲಿ ಪಾದಯಾತ್ರೆ ಮೂಲಕ ಸಾಗಿ ಮಧ್ಯಾಹ್ನ 12 ಗಂಟೆಗೆ ಸಮಾವೇಶ ನಡೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.