
ಬೆಂಗಳೂರು[ಜೂ.01]: ಮಂಗಳವಾರ ಬೋರ್ಗರೆದಿದ್ದ ಮಳೆಗೆ ತತ್ತರಿಸಿದ್ದ ಮಂಗಳೂರು ನಗರ ಇದೀಗ ಸಹಜ ಸ್ಥಿತಿಗೆ ಮರಳಿದೆ. ಎರಡು ದಿನಗಳಿಂದ ನಿರಂತರ ಬಿಸಿಲಿನ ವಾತಾವರಣವಿದ್ದು ತುರ್ತು ಪರಿಸ್ಥಿತಿ ನಿಭಾಯಿಸಲು ಮಂಗಳೂರಿಗೆ ಆಗಮಿಸಿದ್ದ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (ಎನ್‌ಡಿಆರ್‌ಎಫ್) ಬೆಂಗಳೂರಿಗೆ ಮರಳಿದೆ.
ನಗರದ ಕೊಟ್ಟಾರ, ಕುದ್ರೋಳಿ, ತೊಕ್ಕೊಟ್ಟು, ಜಪ್ಪಿನಮೊಗರು ಮುಂತಾದೆಡೆ ಜಲಾವೃತಗೊಂಡಿದ್ದ ತಗ್ಗು ಪ್ರದೇಶಗಳಲ್ಲಿ ಈಗ ನೀರು ಕಡಿಮೆಯಾಗುತ್ತಿದೆ. ಸಂಪೂರ್ಣವಾಗಿ ಹಾನಿಗೊಳಗಾಗಿರುವ ಮನೆಗಳು ಸೇರಿದಂತೆ ಪರಿಹಾರ ವಿತರಣೆ ಕಾರ್ಯ ನಡೆಯುತ್ತಿದೆ. ಭಾಗಶಃ ಹಾಗೂ ಸಣ್ಣಪುಟ್ಟತೊಂದರೆಗಳೊಗಾಗಿರುವ ಮನೆಗಳ ಸಮೀಕ್ಷೆ ನಡೆಸಿ ಪರಿಹಾರ ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಸಿಕಾಂತ ಸೆಂಥಿಲ್ ತಿಳಿಸಿದ್ದಾರೆ. ಈಗಾಗಲೇ ರಾಜ್ಯಕ್ಕೆ ಮುಂಗಾರು ಪ್ರವೇಶ ಆಗಿರುವುದರಿಂದ ಆ ಮಳೆಯನ್ನು ಎದುರಿಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ ಎಂದು ಅವರು ತಿಳಿಸಿದ್ದಾರೆ.
ಹೈ-ಕದಲ್ಲಿ ಮಳೆ ಆರ್ಭಟ: ರಾಜ್ಯಾದ್ಯಂತ ಕಡಿಮೆಯಾಗಿರುವ ಮುಂಗಾರು ಪೂರ್ವ ಮಳೆ ಗುರುವಾರದಂದು ಹೈದ್ರಾಬಾದ್ ಕರ್ನಾಟಕ ವ್ಯಾಪ್ತಿಯ ರಾಯಚೂರು ಮತ್ತು ಕಲಬುರಗಿ ಜಿಲ್ಲೆಗಳ ಕೆಲವೆಡೆ ಅಬ್ಬರಿಸಿದೆ. ಸಿಡಿಲಿನ ಹೊಡೆತಕ್ಕೆ 9 ಕುರಿಗಳು ಸ್ಥಳದಲ್ಲಿಯೇ ಮೃತಪಟ್ಟು ಇಬ್ಬರು ಕುರಿಗಾಯಿಗಳು ತೀವ್ರ ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಚಿಂದಾನೂರ ತಾಂಡಾದಲ್ಲಿ
ಗುರುವಾರ ಮಧ್ಯಾಹ್ನ ನಡೆದಿದೆ. ರಾಯಚೂರು ಜಿಲ್ಲೆಯ ಲಿಂಗಸ್ಗೂರು ತಾಲೂಕಿನ ಗುಂತಗೋಳ ಮತ್ತು ಸಿರವಾರ ಪಟ್ಟಣದಲ್ಲಿ ಗುರುವಾರ ಭಾರಿ ಗುಡುಗು ಸಿಡಿಲು ಸಹಿತ ಆಲಿಕಲ್ಲು ಮಳೆಯಾಗಿದೆ. ಮಳೆ ಬಿರುಗಾಳಿಯಿಂದಾಗಿ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.