
ನವದೆಹಲಿ(ಡಿ.07): ಪ್ರಧಾನಿ ನರೇಂದ್ರ ಮೋದಿ ಅವರನ್ನು ನೀಚ ಎಂದು ಜರಿದ ಕಾಂಗ್ರೆಸ್ ಹಿರಿಯ ಮುಖಂಡ ಮಣಿಶಂಕರ್ ಅಯ್ಯರ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ
2014ರ ಲೋಕಸಭಾ ಚುನಾವಣೆಗೂ ಮುನ್ನ ನರೇಂದ್ರ ಮೋದಿಯನ್ನು 'ಚಾಯ್'ವಾಲಾ' ಎಂದು ಕರೆಯುವ ಮೂಲಕ ವಿವಾದ ಮೈಮೇಲೆ ಎಳೆದುಕೊಂಡಿದ್ದ ಅಯ್ಯರ್, ಇದೀಗ ಪ್ರಧಾನಿ ನರೇಂದ್ರ ಮೋದಿಯನ್ನು ಸಂಸ್ಕೃತಿಯಿಲ್ಲದ ಹೀನ ರಾಜಕಾರಣಿ ಎಂದು ವ್ಯಂಗ್ಯವಾಡಿದ್ದಾರೆ.
ನರೇಂದ್ರ ಮೋದಿ ಗುಜರಾತ್ ಸಮಾವೇಶದಲ್ಲಿ ಮೋದಿ, "ದೇಶಕಟ್ಟುವಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಪಾತ್ರ ಮಹತ್ವದ್ದಾಗಿದೆ. ಆದರೆ ಅವರನ್ನು ತುಳಿಯುವ ಪ್ರಯತ್ನ ನಡೆದಿತ್ತಾದರೂ ಅದು ಯಶಸ್ವಿಯಾಗಲಿಲ್ಲ ಎಂದು ಮಾಜಿ ಪ್ರಧಾನಿ ಜವಹರ್ ಲಾಲ್ ನೆಹರೂ ಹೆಸರು ಪ್ರಸ್ತಾಪಿಸದೇ ಟೀಕೆ ಮಾಡಿದ್ದರು.
ಪ್ರಧಾನಿ ಮಾತಿಗೆ ಪ್ರತಿಕ್ರಿಯಿಸಿರುವ ಅಯ್ಯರ್, ಅಂಬೇಡ್ಕರ್ ಆಶಯ ನನಸಾಗಿಸುವಲ್ಲಿ ನೆಹರು ಪ್ರಮುಖ ಪಾತ್ರ ವಹಿಸಿದ್ದರು ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.