
ಗೋವಾ(ಅ.12): ಪ್ರಧಾನಿ ಮೋದಿ ಅವರನ್ನು ರಕ್ತದ ದಲ್ಲಾಳಿ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕರೆದಿರುವುದಕ್ಕೆ ರಕ್ಷಣಾ ಸಚಿವ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ಆಡಳಿತದಲ್ಲಿ ಸಬ್ ಮರೀನ್ ಮತ್ತು ಹೆಲಿಕಾಪ್ಟರ್ ಖರೀದಿಸುವ ವೇಳೆ ದಲ್ಲಾಳಿಗಳಿದ್ದರು ಎಂದಿದ್ದಾರೆ. ನಾನು ಸಚಿವನಾಗಿ ಅಧಿಕಾರ ಸ್ವೀಕರಿಸಿ ಇಲಾಖೆಗೆ ಬಂದ ನಂತರ ನನಗೆ ಸತ್ಯದ ಅರಿವಾಯಿತು. ಸಬ್ ಮರೀನ್ ಡೀಲ್ ಮತ್ತು ಅಗಸ್ಟಾ ಹೆಲಿಕಾಪ್ಟರ್ ಹಗರಣದಲ್ಲಿ ದಲ್ಲಾಳಿಗಳಿದ್ದದ್ದು ತಿಳಿದು ಬಂದಿತು ಎಂದು ಹೇಳಿದ್ದಾರೆ. ಇದನ್ನೆಲ್ಲಾ ನೋಡಿದ ಮೇಲೆ ದಲ್ಲಾಳಿ ಪದದ ಅರ್ಥ ಗೊತ್ತಾಗಿದ್ದು ಎಂದು ಲೇವಡಿ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.