ಗೋವಾ ಸಿಎಂ ಯಾರೆಂದು ರಾಜ್ಯ ಸರ್ಕಾರಕ್ಕೇ ಗೊತ್ತಿಲ್ಲ!

Published : Sep 07, 2019, 11:26 AM IST
ಗೋವಾ ಸಿಎಂ ಯಾರೆಂದು ರಾಜ್ಯ ಸರ್ಕಾರಕ್ಕೇ ಗೊತ್ತಿಲ್ಲ!

ಸಾರಾಂಶ

ತಮಾಷೆ ಅಲ್ಲ... ಗೋವಾ ಸಿಎಂ ಯಾರೆಂದು ರಾಜ್ಯ ಸರ್ಕಾರಕ್ಕೇ ಗೊತ್ತಿಲ್ಲ!| ಶಿಕ್ಷಕರ ದಿನಾಚರಣೆ ನಿಮಿತ್ತ ಗೋವಾ ಸರ್ಕಾರ ಬಿಡುಗಡೆ ಮಾಡಿದ ಹೇಳಿಕೆಯಿಂದ ಮುಜುಗರ

ಪಣಜಿ[ಸೆ.07]: ಶಿಕ್ಷಕರ ದಿನಾಚರಣೆ ನಿಮಿತ್ತ ಗೋವಾ ಸರ್ಕಾರ ಬಿಡುಗಡೆ ಮಾಡಿದ ಹೇಳಿಕೆಯೊಂದು ನಗೆಪಾಟಲಿಗೆ ಗುರಿಯಾಗಿದೆ. ಸರ್ಕಾರದ ಹೇಳಿಕೆಯ ಪ್ರಕಾರ ದಿವಂಗತ ಮನೋಹರ್‌ ಪರ್ರಿಕರ್‌ ಈಗಲೂ ಗೋವಾದ ಮುಖ್ಯಮಂತ್ರಿಯಾಗಿದ್ದಾರೆ.

‘ಗೋವಾ ಮುಖ್ಯಮಂತ್ರಿ ಮನೋಹರ್‌ ಪರ್ರಿಕರ್‌ 56ನೇ ಶಿಕ್ಷಕರ ದಿನಾಚರಣೆಯ ನಿಮಿತ್ತ ರಾಜ್ಯದ ಜನತೆಗೆ ಶುಭ ಹಾರೈಸಿದ್ದಾರೆ. ಮಾಜಿ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್‌ ಅವರ ಕೊಡುಗೆಯನ್ನು ಪರ್ರಿಕರ್‌ ಅವರು ಈ ಸಂದರ್ಭದಲ್ಲಿ ಸ್ಮರಿಸಿದ್ದಾರೆ’ ಎಂದು ಮಾಹಿತಿ ಮತ್ತು ಪ್ರಚಾರ ಇಲಾಖೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಪ್ರಮಾದ ಬೆಳಕಿಗೆ ಬರುತ್ತಿದ್ದಂತೆ ತಪ್ಪಿತಸ್ಥರನ್ನು ಗುರುತಿಸಲು ತನಿಖೆಗೆ ಆದೇಶಿಸಲಾಗಿದೆ. 2019 ಮಾಚ್‌ರ್‍ 17ರಂದು ಪರ್ರಿಕರ್‌ ನಿಧನರಾಗಿದ್ದರು. ಪ್ರಮೋದ್‌ ಸಾವಂತ್‌ ಹಾಲಿ ಮುಖ್ಯಮಂತ್ರಿಯಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರ್ನಾಟಕಕ್ಕೆ ಶೀತ ಅಲೆಯ ಕಂಟಕ: ರಾಯಚೂರಿನಲ್ಲಿ 9.4 ಡಿಗ್ರಿಗೆ ಕುಸಿದ ತಾಪಮಾನ! ಎಲ್ಲೆಲ್ಲಿ ಆರೆಂಜ್ ಅಲರ್ಟ್?
ಮುಕೇಶ್ ಅಂಬಾನಿ 68ರಲ್ಲೂ ಫಿಟ್ & ಎನರ್ಜಿಟಿಕ್‌ ಆಗಿರಲು ಬೆಳಗ್ಗಿನ ಈ ಅಭ್ಯಾಸ ಕಾರಣ!