
ನವದೆಹಲಿ (ಡಿ.09): ನೋಟು ನಿಷೇಧ ಪ್ರತಿಭಟನಾ ರ್ಯಾಲಿಯ ವೇಳೆ ಸೇನಾ ನಿಯೋಜನೆ ಬಗ್ಗೆ ಮಮತಾ ಬ್ಯಾನರ್ಜಿ ಮಾಡಿರುವ ಆರೋಪಕ್ಕೆ ಮನೋಹರ್ ಪಾರಿಕ್ಕರ್ 'ನಿಮ್ಮಿಂದ ಇದನ್ನು ನಿರೀಕ್ಷಿಸಿರಲಿಲ್ಲ' ಎಂದು ದೀದಿಗೆ ಪತ್ರ ಬರೆದಿದ್ದಾರೆ.
ನೋಟು ನಿಷೇಧ ವಿರುದ್ಧ ಪ್ರತಿಭಟನಾ ರ್ಯಾಲಿ ನಡೆಸುವ ವೇಳೆ ಟೋಲ್ ಪ್ಲಾಜಾದಲ್ಲಿ ಸೇನೆಯ ನಿಯೋಜನೆ ಕಂಡು ಮಮತಾ ಬ್ಯಾನರ್ಜಿ ಆಕ್ಷೇಪ ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ರಕ್ಷಣಾ ಸಚಿವ ಮನೋಹರ್ ಪರ್ರಿಕರ್, ರಾಜಕೀಯ
ಪಕ್ಷಗಳು ಹಾಗೂ ರಾಜಕಾರಣಿಗಳು ಸಾರ್ವಜನಿಕ ಜೀವನದಲ್ಲಿ ಬೇರೆಯವರ ಬಗ್ಗೆ ಟೀಕೆ ಮಾಡುವುದು ಸಹಜ. ಆದರೆ ಸೇನೆಯ ಬಗ್ಗೆ ಮಾತನಾಡುವಾಗ ಎಚ್ಚರದಿಂದರಬೇಕು. ನಿಮ್ಮಿಂದ ಇಂತಹ ಮಾತನ್ನು ನಿರೀಕ್ಷಿಸಿರಲಿಲ್ಲ. ಇದು ನನಗೆ ಬಹಳ
ನೋವುಂಟು ಮಾಡಿದೆ ಎಂದು ಪತ್ರ ಬರೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.