
ಲಖನೌ(ಮಾ.18): ಉತ್ತರ ಪ್ರದೇಶದಲ್ಲಿ ಬೃಹತ್ ಜಯಭೇರಿ ಬಾರಿಸಿದ ಬಿಜೆಪಿ ನೂತನ ಸಾರಥಿಗಾಗಿ ಹುಡುಕಾಟ ನಡೆಸಿದೆ. ಉತ್ತರ ಪ್ರದೇಶದ ಅಳ್ವಿಕೆಗೆ ಶುದ್ಧಹಸ್ತದ ವ್ಯಕ್ತಿಯ ಆಯ್ಕೆ ಅನಿವಾರ್ಯವಾಗಿದೆ. ಹಾಗಾಗಿ ಕೇಂದ್ರ ಟೆಲಿಕಾಂ ಸಚಿವ ಮನೋಜ್ ಸಿನ್ಹಾ ಅವ್ರನ್ನು ಮೋದಿ ಹಾಗೂ ಅಮಿತ್ ಷಾ ಆಯ್ಕೆ ಮಾಡಿದ್ದಾರೆಂದು ಮೂಲಗಳು ತಿಳಿಸಿವೆ.
ಇಂದು ಸಂಜೆ ಲಖನೌದಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಯಲಿದ್ದು, ಸಿಎಂ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗುತ್ತೆ. ಇದಾದ ಮೇಲೆ ಭಾನುವಾರ ಸಿಎಂ ಪದಗ್ರಹಣ ನಡೆಯಲಿದೆ. ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ಪ್ರಭಾವಿತವಾದುದು ಜಾತಿವಾರು ರಾಜಕಾರಣ. ಆದರೆ ಭೂಮಿಹಾರ ಸಮುದಾಯಕ್ಕೆ ಸೇರಿದ ಮನೋಜ್ ಸಿನ್ಹಾ ಆಯ್ಕೆ ಮೂಲಕ ಜಾತಿ-ವರ್ಗಗಳ ಮತ ಭೇದಕ್ಕೆ ಮೋದಿ ಬ್ರೇಕ್ ಹಾಕಲಿದ್ದಾರೆ. ಈ ಮೂಲಕ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬ ಮಾತನ್ನು ಸಾಕಾರಗೊಳಿಸಲು ಮೋದಿ ಮುಂದಾಗಿದ್ದಾರೆ.
ಉತ್ತರ ಪ್ರದೇಶದಲ್ಲಿ ಚುಕ್ಕಾಣಿ ಹಿಡಿಯಲು ಮೊದಲು ಬಿಜೆಪಿ ರಾಜ್ಯಾಧ್ಯಕ್ಷ ಕೇಶವ್ ಮೌರ್ಯ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೆಸರು ಕೇಳಿ ಬಂದಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.