
ಬೆಂಗಳೂರು(ಫೆ.02): ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗಳಲ್ಲಿ ಒಂದಾಗಿರುವ ಮಂತ್ರಿ ಸ್ವ್ಕೈರ್ ಮಾಲ್ ಭವಿಷ್ಯ ಇಂದು ನಿರ್ಧಾರವಾಗಲಿದೆ. ಮಂತ್ರಿ ಮಾಲ್ ನ ಗೋಡೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲ್ ಅನ್ನು ಮುಚ್ಚಬೇಕೋ ಅಥವಾ ತೆರೆಯಬೇಕು ಎಂಬುದು ನಿರ್ಧಾರವಾಗಲಿದೆ.
ಮಂತ್ರಿ ಮಾಲ್ ಕಟ್ಟಡ ಗುಣಮಟ್ಟ ಕುರಿತು ನೇಮಿಸಿದ್ದ ತಜ್ಞರ ತಂಡ ಸತತ 15 ದಿನಗಳ ಗುಣಮಟ್ಟದ ಬಗ್ಗೆ ಅಧ್ಯಯನ ನಡೆಸಿದ್ದು, ವರದಿಯನ್ನು ಸಿದ್ಧ ಪಡಿಸಿದೆ. ಇಂದು ಮಧ್ಯಾಹ್ನ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ತಜ್ಞರ ಸಮಿತಿ ಆಯುಕ್ತರಿಗೆ ವರದಿ ಸಲ್ಲಿಸುವ ಸಾಧ್ಯತೆ ಇದೆ. ಇದಾದ ಬಳಿಕ ತಜ್ಞರ ಸಮಿತಿ ನೀಡಿರುವ ವರದಿಯನ್ನು ಪರಿಶೀಲಿಸಿ, ಕ್ರಮಕೈಗೊಳ್ಳಲಿದ್ದಾರೆ.
ಜನವರಿ 17 ರಂದು ಮಂತ್ರಿ ಮಾಲ್'ನ ಗೋಡೆ ಕುಸಿದು ಇಬ್ಬರು ಸಿಬ್ಬಂದಿಗಳು ಗಾಯಗೊಂಡಿದ್ದರು. ಇನ್ನೂ ಮಂತ್ರಿಮಾಲ್'ನ ಹಲವು ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದರಿಂದ ಮಾಲ್'ನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಕಾಮಗಾರಿ ಗುಣಮಟ್ಟದ ಪರಿಶೀಲನೆಗೆ ತಜ್ಞರ ಸಮಿತಿಯನ್ನು ರಚಿಸಲಾಗಿತ್ತು. ಆ ತಜ್ಜರ ಸಮಿತಿ ಪರಿಶೀಲನೆ ನಡೆಸಿ ವರದಿಯನ್ನು ತಯಾರಿಸಿದ್ದು, ಇಂದು ಮಂತ್ರಿ ಮಾಲ್‌ನ ಭವಿಷ್ಯ ನಿರ್ಧಾರವಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.