
ಮೈಸೂರು: ಮ್ಯಾನ್‌ಹೋಲ್‌ಗೆ ಪೌರಕಾರ್ಮಿಕರನ್ನು ಇಳಿಸುವಂತಿಲ್ಲ ಎಂಬ ಸುಪ್ರೀಂ ಕೋರ್ಟ್ ಆದೇಶವನ್ನು ಮುರಿದ ಘಟನೆ ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರಲ್ಲಿ ಬುಧವಾರ ನಡೆದಿದೆ.
ನಿತ್ಯ ಸಾವಿರಾರು ಭಕ್ತರು ಭೇಟಿ ನೀಡುವ ಧಾರ್ಮಿಕ ಕ್ಷೇತ್ರವಾದ ಚಾಮುಂಡಿಬೆಟ್ಟದ ಪರಿಸರದಲ್ಲಿ ಪೌರಕಾರ್ಮಿಕನೊಬ್ಬನನ್ನು ಬಲವಂತವಾಗಿ ಮ್ಯಾನ್‌ಹೋಲ್‌ಗೆ ಇಳಿಸಿದ ಆರೋಪ ಕೇಳಿಬಂದಿದೆ.
ಚಾಮುಂಡಿಬೆಟ್ಟದ ಗ್ರಾಪಂ ಅಧ್ಯಕ್ಷೆ ಮತ್ತು ಗ್ರಾಪಂ ಅಭಿವೃದ್ಧಿ ಅಧಿಕಾರಿ ಅವರ ಸೂಚನೆಯ ಮೇರೆಗೆ ಮ್ಯಾನ್‌ಹೋಲ್‌ಗೆ ಪೌರಕಾರ್ಮಿಕರೊಬ್ಬರು ಇಳಿದು ಸ್ವಚ್ಛಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.
ಅಧ್ಯಕ್ಷೆ ತಮ್ಮ ಮನೆ ಮುಂದೆ ಕಟ್ಟಿಕೊಂಡಿದ್ದ ಮ್ಯಾನ್‌ಹೋಲ… ಶುಚಿ ಮಾಡಲು ಪೌರಕಾರ್ಮಿಕನನ್ನು ಇಳಿಸಲು ಬಲವಂತ ಮಾಡಿದ್ದಲ್ಲದೆ ಇಳಿಯ ದಿದ್ದಲ್ಲಿ ಕೆಲಸದಿಂದ ವಜಾ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.