
ಬೆಂಗಳೂರು[ಆ.28] ಅಮೆರಿಕದಲ್ಲಿ ನಡೆಯಲಿರುವ ಅಕ್ಕ ಸಮ್ಮೇಳನಕ್ಕೆ ಕಾಂಗ್ರೆಸ್‌ನ ಶಾಸಕರ ದೊಡ್ಡ ದಂಡೇ ಹೊರಡಲಿದೆ ಎನ್ನಲಾಗುತ್ತಿದೆ. ಈವರೆಗೆ ಶಾಸಕರಾದ ಎಸ್.ಟಿ. ಸೋಮಶೇಖರ್, ಮುನಿರತ್ನ, ಭೈರತಿ ಬಸವರಾಜು ಹಾಗೂ ಭೈರತಿ ಸುರೇಶ್ ಅವರು ಅಮೆರಿಕಕ್ಕೆ ತೆರಳಲಿರುವುದು ಖಚಿತಗೊಂಡಿದೆ. ಇವರಲ್ಲದೆ ಸಚಿವ ಜಮೀರ್ ಅಹಮದ್ ಸೇರಿದಂತೆ ಇನ್ನು ಕೆಲ ಶಾಸಕರು ಅಮೆರಿಕ ಪ್ರವಾಸಕ್ಕೆ ತೆರಳಲಿದ್ದಾರೆ ಎಂದು ಹೇಳಲಾಗುತ್ತಿದೆ.
ಸಿದ್ದರಾಮಯ್ಯ ಅವರು ವಿದೇಶಕ್ಕೆ ತೆರಳಲಿರುವ ಈ ಹಂತದಲ್ಲೇ ಹಲವು ಶಾಸಕರು ವಿವಿಧ ದೇಶಗಳಿಗೆ ತೆರಳಲು ಮುಂದಾಗಿರುವುದಕ್ಕೆ ವಿಶೇಷ ಅರ್ಥ ಕಲ್ಪಿಸಲಾಗುತ್ತಿದ್ದು, ಇದು ಸಮ್ಮಿಶ್ರ ಸರ್ಕಾರಕ್ಕೆ ಧಕ್ಕೆ ತರುವ ಯತ್ನ ಎಂದೇ ಬಿಂಬಿಸಲಾಗುತ್ತಿದೆ.
ಆದರೆ, ‘ಸುವರ್ಣ ನ್ಯೂಸ್.ಕಾಂ’ ನೊಂದಿಗೆ ಮಾನತಾಡಿದ ವಿದೇಶಕ್ಕೆ ತೆರಳಲಿರುವ ಶಾಸಕರೊಬ್ಬರು, ಪೂರ್ವ ನಿರ್ಧರಿತ ಪ್ರವಾಸವಿದು. ನಾವು ವಿದೇಶಕ್ಕೆ ತೆರಳಲು ಸಿದ್ದತೆ ಮಾಡಿಕೊಂಡಾಗ ಸಿದ್ದರಾಮಯ್ಯ ಅವರ ವಿದೇಶ ಯಾತ್ರೆ ಯೋಜನೆಯೇ ರೂಪುಗೊಂಡಿರಲಿಲ್ಲ. ಇಷ್ಟಕ್ಕೂ ಸಿದ್ದರಾಮಯ್ಯ ಅವರು ಕುಟುಂಬ ಸಮೇತ ವಿದೇಶಕ್ಕೆ ತೆರಳುತ್ತಿದ್ದಾರೆ. ವಿನಾಕಾರಣ ರಾಜಕೀಯ ಬಣ್ಣ ಕಟ್ಟಲಾಗುತ್ತಿದೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ