
ಬಳ್ಳಾರಿ (ಜ.05): ಬಳ್ಳಾರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿ ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ವಿವಿಧ ಹತ್ಯೆ ಪ್ರಕರಣಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ.
ರಾಜ್ಯದಲ್ಲಿ ಹೆಚ್ಚು ಹಿಂದೂ ಯುವಕರ ಹತ್ಯೆ ನಡೆಯುತ್ತಿವೆ. ಇದುವರೆಗೆ 24 ಯುವಕರ ಹತ್ಯೆ ನಡೆದಿದೆ. ಈ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಮುಖ್ಯಮಂತ್ರಿಗಳು ಇಂತಹ ಪ್ರಕರಣಗಳನ್ನು ತಡೆಯುವಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚಾಗಿದೆ. ಬೆಂಗಳೂರಿನಲ್ಲಿ 45,547 ಪ್ರಕರಣಗಳು ದಾಖಲಾಗಿದೆ ಎಂದು ಹೇಳಿದರು.
ಅಲ್ಲದೇ ಜನವರಿ 8 ರಂದು ದೀಪಕ್ ಹತ್ಯೆ ಖಂಡಿಸಿ ಬಿಜೆಪಿಯಿಂದ ಮೌನ ಪ್ರತಿಭಟನೆ ನಡೆಯಲಿದೆ ಎಂದರು. ಅಲ್ಲದೇ ಬಿಜೆಪಿ ಮತ್ತು ಪಿಎಫ್ಐ ಹೊಂದಾಣಿಕೆ ಮಾಡಿಕೊಂಡಿವೆ ಎನ್ನುವ ಗೃಹ ಸಚಿವರ ಹೇಳಿಕೆ ಅತ್ಯಂತ ಬೇಜವಾಬ್ದಾರಿಯಿಂದ ಕೂಡಿರುವಂತದ್ದು ಎಂದಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಗೃಹ ಸಚಿವರು ಕ್ರಮ ಕೈಗೊಳ್ಳಲಿ.
ಕಳೆದ ಮೂರು ವರ್ಷದಿಂದ ಹಿಂದೂ ಯುವಕರ ಹತ್ಯೆ ನಡೆದಿದೆ. ಹಿಂದೂ ಯುವಕರನ್ನು ಹೆದರಿಸುವ ತಂತ್ರ ಸರ್ಕಾರದ್ದಾಗಿದೆ. ಪ್ರತಾಪ್ ಸಿಂಹ ಹೇಳಿಕೆ ವಿಚಾರವಾಗಿ ಅವರಿಗೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಲು ಪಕ್ಷ ನಿರ್ಧಾರ ಮಾಡುತ್ತದೆ ಎಂದರು.
ಅಲ್ಲದೇ ಜನವರಿ 28ರಂದು ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇದೇ ಜ.10ರಂದು ಅಮಿತ್ ಶಾ ಅವರು ಚಿತ್ರದುರ್ಗಕ್ಕೆ ಆಗಮಿಸಲಿದ್ದಾರೆ. ಈಗಾಗಲೇ ಬಿಜೆಪಿಗೆ ಯಾತ್ರೆಗೆ ಜನರಿಂದ ಹೆಚ್ಚು ಬೆಂಬಲ ವ್ಯಕ್ತವಾಗಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.