
ಧಾರವಾಡ (ನ.26): ಕಪ್ಪು ಹಣದ ಕಡಿವಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ 500 ಮತ್ತು 1000 ರೂಪಾಯಿ ಮುಖ ಬೆಲೆಯ ನೋಟುಗಳನ್ನು ಅಮಾನ್ಯ ಮಾಡಿರುವುದನ್ನು ಬೆಂಬಲಿಸಿ ಧಾರವಾಡದ ವಿವಿಧ ಸಂಘಟನೆಗಳು ಬೃಹತ್ ಮೆರವಣಿಗೆ ನಡೆಸಿದವು.
ನೂರಾರು ಸಂಖ್ಯೆಯಲ್ಲಿ ಸೇರಿದ್ದ ವಿವಿಧ ಸಂಘಟನೆಗಳ ಕಾರ್ಯಕರ್ತರು 500, 2000 ಸಾವಿರದ ಹೊಸ ನೋಟುಗಳ ಪ್ರತಿಯನ್ನು ಪ್ರದರ್ಶಿಸುತ್ತಾ ನಗರದ ಕಲಾಭವನದಿಂದ ಜಿಲ್ಲಾಧಿಕಾರಿ ಕಚೇರಿಗೆವರೆಗೆ ಮೆರವಣಿಗೆ ಹಮ್ಮಿಕೊಂಡಿದ್ದರು.
ದಾರಿಯುದ್ದಕ್ಕೂ ಪ್ರಧಾನಿ ಮೋದಿ ಪರ ಘೋಷಣೆ ಕೂಗುತ್ತಾ ನೋಟುಗಳನ್ನು ಬ್ಯಾನ್ ಮಾಡಿದ್ದು ಉತ್ತಮ ಬೆಳವಣಿಗೆ, ಪ್ರತಿಪಕ್ಷಗಳು ಈ ಕ್ರಮವನ್ನು ವಿರೋಧಿಸುವುದು ಸರಿಯಲ್ಲ ಅಂತ ಆಕ್ಷೇಪ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.