
ಕಲಬುರಗಿ : ಮಾಜಿ ಶಾಸಕ ಎಂ.ವೈ ಪಾಟೀಲ್ ಬಿಜೆಪಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಬೆನ್ನಲ್ಲೇ, ಅಫಜಲಪೂರ ತಾಲೂಕಿನ ಭಾರತೀಯ ಜನತಾ ಪಕ್ಷದ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.
ಎಂ.ವೈ ಪಾಟೀಲ್ ಅವರನ್ನು ನಿರ್ಲಕ್ಷಿಸಿ ಮಾಲೀಕಯ್ಯ ಗುತ್ತೇದಾರ್’ಗೆ ಟಿಕೆಟ್ ನೀಡಿದ್ದನ್ನು ಖಂಡಿಸಿ ಅಫಜಲಪೂರದ ಬಿಜೆಪಿ ಪದಾಧಿಕಾರಿಗಳು, ತಾಪಂ , ಪುರಸಭೆಯ ಬಿಜೆಪಿ ಸದಸ್ಯರುಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಜಮಾದಾರ ಸೇರಿ ತಾಲೂಕು ಪದಾಧಿಕಾರಿಗಳು, ಶಕ್ತಿ ಕೇಂದ್ರದ ಅಧ್ಯಕ್ಷರುಗಳು ಸೇರಿದಂತೆ ಒಟ್ಟು 250 ಕ್ಕೂ ಹೆಚ್ಚು ಬಿಜೆಪಿ ಮುಖಂಡರುಗಳು ತಮ್ಮ ರಾಜೀನಾಮೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಸಲ್ಲಿಸಿದ್ದಾರೆ.
ರಾಜೀನಾಮೆ ನೀಡಿರುವ ಬಗ್ಗೆ ಮಾಜಿ ಶಾಸಕ ಎಂ.ವೈ.ಪಾಟೀಲ್ ಸುದ್ದಿಗೋಷ್ಠಿ ವಿಷಯ ತಿಳಿಸಿದ್ದಾರೆ. ಜಿಲ್ಲಾ ಪಂಚಾಯತಿಯ ಐವರು ಸದಸ್ಯರೂ ಸಹ ಬಿಜೆಪಿ ಜೊತೆಗಿದ್ದಾರೆ. ಆದರೆ ತಾಂತ್ರಿಕ ಕಾರಣಗಳಿಂದ ಅವರು ಭಹಿರಂಗವಾಗಿ ಸೇರ್ಪಡೆಯಾಗುತ್ತಿಲ್ಲ.
ಒಟ್ಟಾರೆ ಮಾಲೀಕಯ್ಯ ಗುತ್ತೇದಾರ ಕಾಂಗ್ರೆಸ್ ಸೇರ್ಪಡೆಯಿಂದಾಗಿ ಆ ಪಕ್ಷದ ತಾಲೂಕು ಪದಾಧಿಕಾರಿಗಳು, ಕಾರ್ಯಕರ್ತರು ಎಂ.ವೈ.ಪಾಟೀಲ್ ಜೊತೆ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.