
ಬಟಾಲಾ(ಸೆ.04): ಪಂಜಾಬ್'ನ ಗುರುದಾಸ್ ಪುರ್ ಜಿಲ್ಲೆಯ ಬಟಾಲಾದಲ್ಲಿನ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 19 ಮಂದಿ ಸಜೀವ ದಹನವಾಗಿದ್ದಾರೆ.
ಘಟನೆಯಲ್ಲಿ 10ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಖಾನೆಯಲ್ಲಿ ಇನ್ನೂ ಹಲವರು ಸಿಲುಕಿರುವ ಸಾಧ್ಯತೆ ಇದ್ದು, ಸ್ಥಳಕ್ಕೆ ಅಗ್ನಿಶಾಮಕದಳದವರು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಇನ್ನು ಘಟನೆಗೆ ದಿಗ್ಭ್ರಮೆ ವ್ಯಕ್ತಪಡಿಸಿರುವ ಪಂಜಾಬ್ ಸಿಎಂ ಅಮರಿಂದರ್ ಸಿಂಗ್, ಸ್ಫೋಟದಲ್ಲಿ ಪ್ರಾಣ ಕಳೆದುಕೊಂಡ ಮತ್ತು ಗಾಯಗೊಂಡವರ ಕುಟುಂಬದೊಂದಿಗೆ ಸರ್ಕಾರ ಇದೆ ಎಂದು ಭರವಸೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.