
ನವದೆಹಲಿ (ಜು.24): ಇಲ್ಲಿನ ಖಾನ್ ಮಾರುಕಟ್ಟೆ ಸಮೀಪವಿರುವ ಲೋಕನಾಯಕ್ ಭವನದಲ್ಲಿ ಭಾರೀ ಅಗ್ನಿ ಅವಗಢ ಸಂಭವಿಸಿದೆ. ಸ್ಥಳಕ್ಕೆ 25 ಕ್ಕೂ ಹೆಚ್ಚು ಅಗ್ನಿಶಾಮಕ ದಳಗಳು ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.
ಕಟ್ಟಡದಿಂದ ದಟ್ಟ ಹೊಗೆ ಬರುತ್ತಿದ್ದು ಪರಿಸ್ಥಿತಿಯನ್ನು ನಿಯಂತ್ರಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಮಾಡುತ್ತಿದ್ದಾರೆ.
ಈ ಕಟ್ಟಡದಲ್ಲಿ ಸರ್ಕಾರಿ ಪ್ರಮುಖ ಕಚೇರಿಗಳಾದ ಸಿಬಿಐ, ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಕಚೇರಿ ಸೇರಿದಂತೆ ಮುಂತಾದ ಪ್ರಮುಖ ಕಛೇರಿಗಳಿವೆ. ಹೆಚ್ಚಿನ ವಿವರಗಳು ಇನ್ನು ಲಭ್ಯವಾಗಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.