ಮುಂಬೈನಲ್ಲಿ ಅಗ್ನಿ ಅವಘಢ: ಅಗ್ನಿಶಾಮಕ ಸಿಬ್ಬಂದಿಗೆ ಗಾಯ..!

Published : Jun 09, 2018, 03:04 PM IST
ಮುಂಬೈನಲ್ಲಿ ಅಗ್ನಿ ಅವಘಢ: ಅಗ್ನಿಶಾಮಕ ಸಿಬ್ಬಂದಿಗೆ ಗಾಯ..!

ಸಾರಾಂಶ

ಮುಂಬೈನ ಬಂದರು ಪ್ರದೇಶದಲ್ಲಿ ಭಾರೀ ಅಗ್ನಿ ಅವಘಢ ಪಟೇಲ್ ಚೇಂಬರ್ಸ್ ನಲ್ಲಿ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿ ಇಬ್ಬರು ಅಗ್ನಿಶಾಮಕ ದಳ ಸಿಬ್ಬಂದಿಗೆ ಗಾಯ ಏಣಿಯಿಂದ ಬಿದ್ದ ಪರಿಣಾಮ ಸಿಬ್ಬಂದಿಗೆ ಪೆಟ್ಟು

ಮುಂಬೈ (ಜೂ.9): ಮುಂಬೈನ ಬಂದರು ಪ್ರದೇಶದ ಪಟೇಲ್ ಚೇಂಬರ್ಸ್‌ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿ ನಂದಿಸುವಲ್ಲಿ ನಿರತರಾಗಿದ್ದ ಇಬ್ಬರು ಅಗ್ನಿಶಾಮಕ ದಳ ಸಿಬ್ಬಂದಿ ಏಣಿಯಿಂದ ಬಿದ್ದು ಗಾಯಗೊಂಡಿದ್ದಾರೆ.

ಕಟ್ಟಡದ ಒಂದು ಭಾಗ ಕುಸಿದ ಪರಿಣಾಮ ಅಗ್ನಿಶಾಮಕ ಅಧಿಕಾರಿಗಳು ಸಹ ಗಾಯಗೊಂಡಿದ್ದಾರೆ. ಕನಿಷ್ಟ 18 ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು ಬೆಂಕಿ ಆರಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ.

ಕಟ್ಟಡದ ಒಂದು ಭಾಗ ಕುಸಿದ ಕಾರಣ ಜನ ಸಂಚಾರಕ್ಕೂ ಅಡಚಣೆಯಾಗಿದೆ. ಬ್ರಿಟೀಷರ ಕಾಲದ ಕಟ್ಟಡ ಇದಾಗಿದ್ದು, ಅತ್ಯಂತ ಅಪಾಯಕಾರಿ ಕಟ್ಟಡ ವರ್ಗಕ್ಕೆ ಸೇರಿದ್ದ ಇದನ್ನು ಕೆಡವಿ ಹಾಕಲು ನಿರ್ಧರಿಸಲಾಗಿತ್ತು. ಅದೃಷ್ಟವಶಾತ ಯಾವುದೇ ಸಾವು ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಗರ್ಭ ಶ್ರೀಮಂತನೆಂದು ಎಂಜಿನಿಯರ್‌ನನ್ನ ಮದುವೆಯಾದಳು... ಫಸ್ಟ್‌ ನೈಟ್‌ನಲ್ಲೇ ಬಯಲಾಯ್ತು ಕರಾಳ ಸತ್ಯ!
ಧರ್ಮಸ್ಥಳ ನೂರಾರು ಶವ ಹೂಳಿದ ಕೇಸ್: ಬುರುಡೆ ಗ್ಯಾಂಗ್ ಷಡ್ಯಂತ್ರ ಬಯಲು - SIT ವರದಿಯಲ್ಲಿ ಒಬ್ಬರಿಗೆ ಕ್ಲೀನ್ ಚಿಟ್!