
ಲಖನೌ (ಮಾ. 11): ಉತ್ತರ ಪ್ರದೇಶ ಚುನಾವಣೆಗಳ ಫಲಿತಾಂಶಗಳು ಹೊರಬಿದ್ದಿರುವ ಬೆನ್ನಲ್ಲೇ, ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಬಹುಜನ ಸಮಾಜವಾದಿ ಪಕ್ಷದ ವರಿಷ್ಠೆ ಮಾಯಾವತಿ, ಇಲೆಕ್ಟ್ರಾನಿಕ್ಸ್ ವೋಟಿಂಗ್ ಮಷಿನ್’ಗಳಲ್ಲಿ (ಇವಿಎಂ) ಅಕ್ರಮ ನಡೆದಿದೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ಗೆಲುವಿಗೆ ಇವಿಎಂನಲ್ಲಿ ದೋಷ ಹಾಗೂ ಚುನಾವಣಾ ಆಯೋಗವೇ ಕಾರಣ ಎಂದು ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಹೇಳಿದ್ದಾರೆ.
ಮುಸ್ಲಿಂ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಬಿಜೆಪಿಗೆ ಹೆಚ್ಚು ಮತ ಹೋಗಿದ್ದು ಹೇಗೆ ಎಂದು ಮಾಯಾವತಿ ಪ್ರಶ್ನಿಸಿದ್ದಾರೆ.
ಬೇರೆ ಪಕ್ಷಗಳ ಮತಗಳು ಸಹ ಬಿಜೆಪಿಗೆ ಹೋಗಿವೆ ಎಂದು ಆರೋಪಿಸಿದ ಮಾಯಾವತಿ ಯಾವುದೇ ಬಟನ್ ಒತ್ತಿದರೂ ಬಿಜೆಪಿಗೇ ಮತ ಹೋಗುತ್ತಿತ್ತು, ಮತಯಂತ್ರದ ದೋಷ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ, ಆದುದರಿಂದ ಫಲಿತಾಂಶ ರದ್ದು ಮಾಡಿ ಮರು ಚುನಾವಣೆ ನಡೆಸುವಂತೆ ಆಗ್ರಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.