
ನವದೆಹಲಿ[ಏ.03]: ಬಿಎಸ್‌ಪಿ ಅಧ್ಯಕ್ಷೆ ಕುಮಾರಿ ಮಾಯಾವತಿ, ತಾವೇಕೆ ಮದುವೆಯಾಗಿಲ್ಲ ಎಂಬ ವಿಷಯವನ್ನು ಮೊದಲ ಬಾರಿಗೆ ಬಹಿರಂಗಪಡಿಸಿದ್ದಾರೆ.
ಸಮಾಜದ ತುಳಿತಕ್ಕೊಳಪಟ್ಟಸಮುದಾಯಗಳನ್ನು ಮೇಲೆತ್ತುವ ಸಲುವಾಗಿಯೇ ನನ್ನ ಜೀವನವನ್ನೇ ಮುಡಿಪಾಗಿಟ್ಟಿದ್ದೇನೆ. ಅಲ್ಲದೆ, ಇದೇ ಕಾರಣಕ್ಕಾಗಿ ನಾನು ವಿವಾಹವನ್ನು ಸಹ ಆಗಲಿಲ್ಲ ಎಂದು ಬಿಎಸ್‌ಪಿ ವರಿಷ್ಠೆ ಮಾಯಾವತಿ ಅವರು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.
ಮಾಯಾ ಸಿಎಂ ಆಗಿದ್ದ ವೇಳೆ ಬಿಎಸ್‌ಪಿ ನಾಯಕರ ಪ್ರತಿಮೆಗಳ ನಿರ್ಮಾಣಕ್ಕೆ 2000 ಕೋಟಿ ರು. ವೆಚ್ಚ ಮಾಡಲಾಗಿದೆ. ಇದು ಜನರ ತೆರಿಗೆ ಹಣದ ದುರುಪಯೋಗ ಎಂದು ಆರೋಪಿಸಿ ವಕೀಲರೊಬ್ಬರು 2009ರಲ್ಲಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ವೇಳೆ ತಾವು ಬಡವರ ಪರ ಎಂದು ಸಾಬೀತುಪಡಿಸಲು ಮಾಯಾ ಮೇಲ್ಕಂಡ ಹೇಳಿಕೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.