
ಬೆಂಗಳೂರು[ಜೂ.17]: ಜಿಂದಾಲ್‌ಗೆ ಭೂಮಿ ಪರಭಾರೆ ಮಾಡುವ ಸರ್ಕಾರದ ನಿರ್ಧಾರದ ವಿರುದ್ಧ ಬೆಂಗಳೂರಿನಲ್ಲಿ ಶನಿವಾರ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ತಮ್ಮ ಕುರಿತು ಆಡಿರುವ ಮಾತುಗಳು ಅವರ ಸಂಸ್ಕೃತಿಯನ್ನು ತೋರಿಸುತ್ತವೆ. ಬಾಲ ಇದ್ದವರು ಮಾತ್ರ ಈ ರೀತಿ ಮಾತನಾಡುತ್ತಾರೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ತೀಕ್ಷ$್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮಹಾ ಮೇಧಾವಿಯಾಗಿರುವ ಶೋಭಾ ಕರಂದ್ಲಾಜೆ ಅವರು ಜಿಂದಾಲ್‌ಗೆ ಭೂಮಿ ಪರಭಾರೆ ವಿಷಯದಲ್ಲಿ ನನ್ನನ್ನು ಕುರಿತು ಮಾಡಿರುವ ಟೀಕೆಯನ್ನು ಗಮನಿಸಿದ್ದೇನೆ. ‘ಎಂ.ಬಿ.ಪಾಟೀಲರಿಗೆ ಕಾನೂನಿನ ಬಗ್ಗೆ ಜ್ಞಾನವಿಲ್ಲ. ಶತಮೂರ್ಖ ಗೃಹ ಮಂತ್ರಿಗಳು, ಮತ್ತೆ ಬಾಲ ಬಿಚ್ಚಿದ್ದಾರೆ’ ಎಂದು ಹೇಳಿದ್ದಾರೆ. ಬಹುಶಃ ನಿಮ್ಮಷ್ಟು ಅಪಾರ ಪಾಂಡಿತ್ಯ, ಮೇಧಾವಿತನ, ಸಭ್ಯತೆ ನನ್ನಲ್ಲಿ ಇಲ್ಲ. ಆದರೆ, ಮಂಗಗಳು ಸೇರಿದಂತೆ ಇತರೆ ಪ್ರಾಣಿಗಳಿಗೆ ಬಾಲ ಇರುತ್ತದೆ ಎಂದು ತಿಳಿದುಕೊಂಡಿದ್ದೇನೆ. ಆದರೆ, ನಾನು ಮನುಷ್ಯ. ನನಗೆ ಬಾಲ ಇಲ್ಲ. ನಿಮಗೆ ಬಾಲ ಇರಬಹುದೇನೋ ಎಂಬುದು ವಿಸ್ಮಯ. ಏಕೆಂದರೆ, ಬಾಲ ಇದ್ದವರು ಮಾತ್ರ ಈ ರೀತಿ ಮಾತನಾಡುತ್ತಾರೆ’ ಎಂದು ಖಾರವಾಗಿ ಉತ್ತರಿಸಿದ್ದಾರೆ
ಶೋಭಾ ಅವರ ಚರಿತ್ರೆ, ಸಂಸ್ಕೃತಿ ಇಡೀ ರಾಜ್ಯದ ಜನತೆಗೆ ಗೊತ್ತಿದೆ. ಹಾಗೆಯೇ, ನನ್ನ ಚರಿತ್ರೆ, ಸಂಸ್ಕೃತಿಯೂ ರಾಜ್ಯದ ಜನತೆಗೆ ತಿಳಿದ ವಿಷಯವಾಗಿದೆ. ಆದರೆ, ಹೆಣ್ಣು ಮಗಳಾದ ತಮ್ಮ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೆ, ನೀವು ಬಳಸಿದ ಭಾಷೆ ನಿಮ್ಮ ಸಂಸ್ಕೃತಿಯನ್ನು ತೋರುತ್ತದೆ. ಜಿಂದಾಲ್ ಭೂಮಿ ಪರಭಾರೆ ಕುರಿತು ಸಂಪುಟ ಉಪ ಸಮಿತಿ ರಚನೆಯಾಗಿದ್ದು, ಅಲ್ಲಿ ಎಲ್ಲ ಸತ್ಯಾಸತ್ಯಗಳು ಹೊರಬರಲಿವೆ. ಅಲ್ಲಿಯವರೆಗೆ ತಾಳ್ಮೆ ಕಳೆದುಕೊಳ್ಳದೆ ಗೌರವದಿಂದ ವರ್ತಿಸಿರಿ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.