
ಬೆಂಗಳೂರು : ಕರ್ನಾಟಕದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವಿನ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿ 25 ಮಂದಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.ಕಾಂಗ್ರೆಸ್ ನಿಂದ 15 ಹಾಗೂ ಜೆಡಿಎಸ್ ನಿಂದ 10 ಮಂದಿ ನೂತನ ಸಚಿವರಾಗಿದ್ದಾರೆ. ಇದೇ ಬೆನ್ನಲ್ಲೇ ಕೆಲವರ ಅಸಮಾಧಾನ ಭುಗಿಲೆದ್ದಿದೆ. ತಮಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಲು ಕೂಡ ಮುಂದಾಗಿದ್ದಾರೆ.
ಇನ್ನು ಎಂ.ಬಿ ಪಾಟೀಲ್ ಅವರಿಗೆ ಕೂಡ ಮೊದಲ ಸಂಪುಟ ರಚನೆ ವೇಳೆ ಸಚಿವ ಸ್ಥಾನ ದೊರಕದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದಾರೆ. ಇಂದು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಎಂ.ಬಿ ಪಾಟೀಲ್ ಅವರ ಮುಂದೆ ತಮಗೆ ಅನ್ಯಾಯವಾಗಿದೆ ಎಂದು ಕಣ್ಣೀರು ಹಾಕಿದ್ದಾರೆ.
ಸಮುದಾಯ ಎದುರಿಸಿ ಪಕ್ಷಕ್ಕಾಗಿ ಹೋರಾಟ ಮಾಡಿದ್ದು, ಕಾಂಗ್ರೆಸ್ ನಿಂದ ನನಗೆ ದ್ರೋಹ ಮಾಡಲಾಗಿದೆ. ಅಲ್ಲದೇ ಈಗಲೇ ತಮಗೆ ಸಚಿವ ಸ್ಥಾನ ನೀಡುವುದಾದರೆ ಕೋಡಿ. ಇಲ್ಲವಾದಲ್ಲಿ ತಮಗೆ ಬೇಡ ಎಂದು ಹೇಳಿದ್ದಾರೆ.
ನಿನ್ನೆಯಷ್ಟೇ ಕಾಂಗ್ರೆಸ್ ನಿಂದ 15 ಮಂದಿ ಸಚಿವ ಸ್ಥಾನ ಅಲಂಕರಿಸಿದ್ದು, ಈ ವೇಳೆ ತಮಗೆ ಸಂಪುಟದಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಪಾಟೀಲ್ ಮುಂದಾಗಿದ್ದರು. ಅಲ್ಲದೇ ಅವರ ಅಭಿಮಾನಿಗಳೂ ಕೂಡ ಪ್ರತಿಭಟನೆ ನಡೆಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.