
ಬೆಂಗಳೂರು : ಉಪಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿಟ್ಟು ತೀವ್ರ ಲಾಬಿ ನಡೆಸಿದ್ದ ಬಬಲೇಶ್ವರ ಶಾಸಕ ಹಾಗೂ ಮಾಜಿ ಸಚಿವ ಎಂ.ಬಿ. ಪಾಟೀಲ್ ಅವರಿಗೆ ಸಚಿವ ಸ್ಥಾನವೂ ಇಲ್ಲದಂತಾಗಿದೆ.
ಸಿದ್ದರಾಮಯ್ಯ ಸಂಪುಟದಲ್ಲಿ ಜಲಸಂಪನ್ಮೂಲ ಸಚಿವರಾಗಿ ಕೆಲಸ ಮಾಡಿದ್ದ ಲಿಂಗಾಯತ ಸಮುದಾಯದ ಪ್ರಭಾವಿ ಮುಖಂಡ ಎಂ.ಬಿ. ಪಾಟೀಲ್ ಡಿಸಿಎಂ ಹುದ್ದೆಯತ್ತ ಕಣ್ಣಿಟ್ಟಿದ್ದರು. ಆದರೆ, ಜಿಲ್ಲಾ ರಾಜಕಾರಣ ಹಾಗೂ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದ ನಾಯಕತ್ವವು ಅವರ ಸಚಿವ ಸ್ಥಾನಕ್ಕೆ ಮುಳುವಾಗಿ ಪರಿಣಮಿಸಿತು. ಬಸವನ ಬಾಗೇವಾಡಿ ಶಾಸಕ ಹಾಗೂ ನೂತನ ಸಚಿವ ಶಿವನಾಂದ ಪಾಟೀಲ್ ಅವರು ಎಂ.ಬಿ.ಪಾಟೀಲ್‌ಗೆ ಸಚಿವ ಸ್ಥಾನ ನೀಡಿದರೆ ರಾಜೀನಾಮೆ ನೀಡುವುದಾಗಿ ಬೆದರಿಕೆಯೊಡ್ಡಿದ್ದರು.
ಲಿಂಗಾಯತ ಧರ್ಮದ ಹೋರಾಟವೂ ಸಹ ಕಾಂಗ್ರೆಸ್‌ಗೆ ಯಾವುದೇ ಲಾಭ ತಂದುಕೊಡಲಿಲ್ಲ. ಜತೆಗೆ ಹಾಲಿ ಸಚಿವರೂ ಸೋಲುವ ಪರಿಸ್ಥಿತಿ ಎದುರಾಯಿತು. ಈ ಹಿನ್ನೆಲೆಯಲ್ಲಿ ಅವರನ್ನು ಸಚಿವ ಸ್ಥಾನಕ್ಕೂ ಪರಿಗಣಿಸಿಲ್ಲ ಎಂದು ಹೇಳಲಾಗಿದೆ. ಇನ್ನೊಂದು ಮೂಲದ ಪ್ರಕಾರ ಕಾಂಗ್ರೆಸ್ ಪಕ್ಷವು ಲಿಂಗಾಯತ ಮತಬ್ಯಾಂಕ್ ಓಲೈಕೆಗೆ ಎಂ.ಬಿ.ಪಾಟೀಲ್‌ಗೆ ಕೆಪಿಸಿಸಿ ಅಧ್ಯಕ್ಷ ಪಟ್ಟಕಟ್ಟುವ ಚಿಂತನೆಯಲ್ಲಿದೆ ಎಂಬ ಮಾತೂ ಕೇಳಿಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.