
ಬೆಂಗಳೂರು[ಜು.9] ಕನ್ನಡಕ್ಕೆ ಸಂಬಂಧಿಸಿ ನಾನು ಮಾಡಿದ್ದ ಟ್ವೀಟ್ ನ್ನು ಕೆಲ ರಾಜಕಾರಣದ ದುಷ್ಟ ಶಕ್ತಿಗಳು ತಮಗೆ ಬೇಕಾದಂತೆ ಬಳಕೆ ಮಾಡಿಕೊಳ್ಳಲು ಯತ್ನ ಮಾಡುತ್ತಿವೆ. ಅವಕಾಶಗಳು ತೆರೆದುಕೊಳ್ಳಲು ವಿದ್ಯಾರ್ಥಿಗಳು ಕನ್ನಡ ಮತ್ತು ಇಂಗ್ಲಿಷ್ ಎರಡನ್ನು ಕಲಿಯಬೇಕು ಎಂದು ಹೇಳಿದ್ದೆ. ಕರ್ನಾಟಕದ ಯುವಕರ ಏಳಿಗೆ ಗಮನದಲ್ಲಿ ಇಟ್ಟುಕೊಂಡೇ ಹೀಗೆ ಹೇಳಿದ್ದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿರುವುದು ಇದನ್ನೆ. ದಯವಿಟ್ಟು ನನ್ನ ಹೇಳಿಕೆ ತಿರುಚಬೇಡಿ.. ಎಂದು ಕಿರಣ್ ಮಜುಂದಾರ್ ಶಾ ಟ್ವೀಟ್ ಮಾಡಿದ್ದಾರೆ.
ಮತ್ತೊಮ್ಮೆ ಕನ್ನಡಿಗರ ಭಾವನೆ ಕೆರಳಿಸಿದ ಕಿರಣ್ ಮಜುಂದಾರ್ ಶಾ
ಕನ್ನಡ ಸಂಘಟನೆಗಳನ್ನುಅತ್ಯಲ್ಪ ಎಂದು ಕರೆದು ಮಾಧ್ಯಮಗಳು ಅವಕ್ಕೆ ಪುಕ್ಕಟೆ ಪ್ರಚಾರ ನೀಡುತ್ತಿವೆ ಎಂದು ಟ್ವೀಟ್ ಮಾಡಿದ್ದ ಉದ್ಯಮಿ ಕಿರಣ್ ಮಜೂಂದಾರ್ ಶಾ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಕನ್ನಡಿಗರ ಭಾವನೆ ಕೆರಳಿಸಿದ್ದ ಬಯೋಕಾನ್ ಸಂಸ್ಥೆಯ ಮುಖ್ಯಸ್ಥೆಯನ್ನು ತರಾಟೆಗೆ ತೆಗೆದುಕೊಂಡಿದ್ದರು.
ಅಲ್ಲದೇ ಮಾಧ್ಯಮಗಳು ಕಿರಣ್ ಮಾತನ್ನು ಖಂಡಿಸಿದ್ದವು.ಇದೆಲ್ಲವನ್ನು ನೋಡಿದ ಶಾ ತಾನು ಹೇಳಿರುವುದರಲ್ಲಿ ತಪ್ಪಿಲ್ಲ ಎಂದು ಸಮರ್ಥನೆ ನೀಡುವುದರೊಂದಿಗೆ ವಿವಾದಕ್ಕೆ ತೇಪೆ ಹಾಕುವ ಕೆಲಸ ಮಾಡಲು ಮುಂದಾಗಿರುವುದು ಸ್ಪಷ್ಟ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.