ಮೆಡಿಕಲ್ ಶುಲ್ಕ ಎಷ್ಟು ಹೆಚ್ಚಳ..?

First Published Jun 19, 2018, 8:56 AM IST
Highlights

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಶಿಕ್ಷಣದ ಶುಲ್ಕ ಹೆಚ್ಚಳಕ್ಕೆ ಕಾಲೇಜುಗಳ ಆಡಳಿತ ಮಂಡಳಿ ಮನವಿ ಮಾಡಿದ್ದು, ಇದುವರೆಗೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. 

ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಶಿಕ್ಷಣದ ಶುಲ್ಕ ಹೆಚ್ಚಳಕ್ಕೆ ಕಾಲೇಜುಗಳ ಆಡಳಿತ ಮಂಡಳಿ ಮನವಿ ಮಾಡಿದ್ದು, ಇದುವರೆಗೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. 

ವಿಧಾನಸೌಧದಲ್ಲಿ ಸೋಮವಾರ ವೈದ್ಯಕೀಯ ಕಾಲೇಜುಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ, ಅಲ್ಪಸಂಖ್ಯಾತ ವೈದ್ಯಕೀಯ ಕಾಲೇಜು, ದಂತ ವೈದ್ಯಕೀಯ ಕಾಲೇಜುಗಳ ಶುಲ್ಕದ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಕಾಲೇಜು ಸಿಬ್ಬಂದಿಯ ವೇತನ ಶೇ.30ರಷ್ಟು ಜಾಸ್ತಿ ಆಗಿದೆ. ಆಡಳಿತ ಮಂಡಳಿಯ ಹಿತದೃಷ್ಟಿಯಿಂದ ಶುಲ್ಕ ಹೆಚ್ಚಳ ಮಾಡುವಂತೆ ಕೇಳಿಕೊಂಡಿದ್ದಾರೆ. ಜತೆಗೆ ಡೀಮ್ಡ್ ವಿವಿಗಳಿಗೂ ನಮಗೂ ಇರುವ ವ್ಯತ್ಯಾಸ ಸರಿಪಡಿಸಿ ಎಂದು ಬೇಡಿಕೆ ಇಟ್ಟಿದಾರೆ ಎಂದರು. 

ಬುಧವಾರ ಡೀಮ್ಡ್ ವಿವಿಗಳ ಸಭೆ ಕರೆ  ಯಲಾಗಿದೆ. ಬಳಿಕ ಶುಲ್ಕ ಹೆಚ್ಚಳ ಮಾಡ ಬೇಕೋ, ಬೇಡವೋ ಎಂಬ ನಿರ್ಧಾರ ಕೈಗೊಳ್ಳಲಾಗುವುದು ಎಂದ ಸಚಿವರು, ಆರು ಸರ್ಕಾರಿ ಮೆಡಿಕಲ್ ಕಾಲೇಜುಗಳ ಆರಂಭಕ್ಕೆ ಎಂಸಿಐ ಅನುಮತಿ ಕೊಟ್ಟಿಲ್ಲ. ಈ ಸಂಬಂಧ ಮಾನ್ಯತೆ ಪಡೆಯಲು ಪ್ರಯತ್ನಿಸುತ್ತೇವೆ ಎಂದು ತಿಳಿಸಿದರು.

click me!