
ಬೆಂಗಳೂರು : ಆರೋಗ್ಯ ಕರ್ನಾಟಕ ಯೋಜನೆಯಡಿ ಪ್ರತಿ ಕುಟುಂಬಕ್ಕೆ ಇರುವ ವೈದ್ಯಕೀಯ ವೆಚ್ಚದ ಮಿತಿಯನ್ನು 1.5 ಲಕ್ಷ ರು. ಗಳಿಂದ 5 ಲಕ್ಷ ರು.ವರೆಗೆ ಹೆಚ್ಚಳ ಮಾಡಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಹಣಕಾಸು ಇಲಾಖೆ ಅನುಮೋದನೆ ಪಡೆದು ಸಚಿವ ಸಂಪುಟದಲ್ಲಿ ನಿರ್ಧರಿಸಲಾಗುವುದು ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ರಾಜ್ಯದಲ್ಲಿ ‘ಆರೋಗ್ಯ ಕರ್ನಾಟಕ’ ಹೆಸರಿನಲ್ಲಿ ಸಾರ್ವತ್ರಿಕ ಆರೋಗ್ಯ ವಿಮಾ ಯೋಜನೆ ಪ್ರಾರಂಭಿಸಿ ಈಗಾಗಲೇ ಸೇವೆ ನೀಡಲಾಗುತ್ತಿದೆ. ಯೋಜನೆಯಡಿ 1.13 ಕೋಟಿ ಬಿಪಿಎಲ್ ಕುಟುಂಬಗಳಿಗೆ ವಾರ್ಷಿಕ 1.5 ಲಕ್ಷ ರು. ಹಾಗೂ ಉಳಿದ ಎಪಿಎಲ್ ಕುಟುಂಬಗಳಿಗೆ ಶೇ.30 ರಷ್ಟು ವೆಚ್ಚವನ್ನು ಸರ್ಕಾರ ಭರಿಸುತ್ತಿದೆ. ಒಟ್ಟು 1.40 ಕೋಟಿ ಕುಟುಂಬಗಳು ಈ ಯೋಜನೆಯಡಿ ಪ್ರಯೋಜನ ಪಡೆಯಬಹುದು.
ಇದೀಗ ಕೇಂದ್ರ ಸರ್ಕಾರವು ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆಯಡಿ ‘ಆಯುಷ್ಮಾನ್ ಭಾರತ’ (ಮೋದಿ ಕೇರ್) ವಿಮಾ ಯೋಜನೆ ಜಾರಿಗೊಳಿಸಲಾಗುತ್ತಿದೆ. ಇದರಡಿ ಪ್ರತಿ ಬಿಪಿಎಲ್ ಕುಟುಂಬಕ್ಕೆ ವಾರ್ಷಿಕ 5 ಲಕ್ಷ ರು. ವೈದ್ಯಕೀಯ ವೆಚ್ಚ ಭರಿಸಲಾಗುವುದು. ಯೋಜನೆಯಡಿ ರಾಜ್ಯದ 62 ಲಕ್ಷ ಬಿಪಿಎಲ್ ಕುಟುಂಬಗಳು ಸೌಲಭ್ಯ ಪಡೆಯಲಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಹೀಗಾಗಿ ಆರೋಗ್ಯ ಕರ್ನಾಟಕ ಯೋಜನೆಯಡಿ ಬರುವುದಾಗಿ ಗುರುತಿಸಿದ್ದ 1.13 ಕೋಟಿ ಕುಟುಂಬಗಳಿಂದ 62 ಲಕ್ಷ ಕುಟುಂಬಗಳ ಹೊರೆ ರಾಜ್ಯ ಸರ್ಕಾರಕ್ಕೆ ಕಡಿಮೆಯಾಗಲಿದೆ. ಹೀಗಾಗಿ ಆರೋಗ್ಯ ಕರ್ನಾಟಕ ಯೋಜನೆಯಡಿ ಬರಲಿರುವ ಸುಮಾರು 51 ಲಕ್ಷ ಕುಟುಂಬಗಳಿಗೂ ಚಿಕಿತ್ಸಾ ವೆಚ್ಚ ಮಿತಿ ಹೆಚ್ಚಳ ಮಾಡಲು ಚಿಂತನೆ ಮಾಡಿದ್ದೇವೆ ಎಂದು ಪಾಟೀಲ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.