
ಶಿಲ್ಲಾಂಗ್(ಡಿ.15): ಭಾರತವನ್ನು ಹಿಂದೂ ರಾಷ್ಟ್ರ ಎಂದು ಘೋಷಿಸಬೇಕು ಎಂದು ಸಲಹೆ ನೀಡಿದ್ದ, ಮೇಘಾಲಯ ಹೈಕೋರ್ಟ್ ನ್ಯಾಯಮೂರ್ತಿ ಸುದೀಪ್ ರಂಜನ್ ಸೇನ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ನ್ಯಾಯಮೂರ್ತಿ ಸುದೀಪ್ ರಂಜನ್ ಸೇನ್, ದೇಶದ ಜಾತ್ಯಾತೀತ ತತ್ವಕ್ಕೆ ಧಕ್ಕೆ ತರುವಂತ ಯಾವುದೇ ಹೇಳಿಕೆಯನ್ನು ತಾವು ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಭಾರತ ಇಸ್ಲಾಮಿಕ್ ದೇಶವಾಗಿ ಪರಿವರ್ತನೆಯಾಗಬಾರದು ಎಂದಷ್ಟೇ ತಾವು ಹೇಳಿದ್ದಾಗಿ ಸುದೀಪ್ ರಂಜನ್ ಸೇನ್ ಸ್ಪಷ್ಟನೆ ನೀಡಿದ್ದಾರೆ.
ಸುದೀಪ್ ರಂಜನ್ ಸೇನ್ ಹೇಳಿಕೆ ರಾಜಕೀಯ ಮತ್ತು ನ್ಯಾಯಾಂಗ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ಹಲವು ರಾಜಕೀಯ ನೇತಾರರು ಮತ್ತು ನಿವೃತ್ತ ನ್ಯಾಯಮೂರ್ತಿಗಳು ಸೇನ್ ಹೇಳಿಕೆಯನ್ನು ಖಂಡಿಸಿದ್ದಾರೆ.
ಈ ಮಧ್ಯೆ ತಾವು ಯಾವುದೇ ರಾಜಕೀಯ ಪಕ್ಷ ಅಥವಾ ಸಂಘಟನೆಗೆ ಸೇರಿದವರಲ್ಲ ಎಂದು ಸ್ಪಷ್ಟಪಡಿಸಿರುವ ಸೇನ್, ವಿಭಜನೆ ವೇಳೆ ಪಾಕಿಸ್ತಾನ ಇಸ್ಮಾಮಿಕ್ ರಾಷ್ಟ್ರವಾದಂತೆ ಭಾರತ ಕೂಡ ಹಿಂದೂ ರಾಷ್ಟ್ರವಾಗಬೇಕಿತ್ತು ಎಂಬುದಷ್ಟೇ ತಮ್ಮ ಅನಿಸಿಕೆಯಾಗಿತ್ತು ಎಂದು ಹೇಳಿದ್ದಾರೆ.
ಭಾರತ ಹಿಂದೂ ದೇಶ: ಮೋದಿ ಮಾಡ್ತಾರೆ ಎಂದ ಹೈಕೋರ್ಟ್ ನ್ಯಾಯಾಧೀಶ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.