ಕಾಶ್ಮೀರದ ಸ್ಥಿತಿಗತಿ ಬಗ್ಗೆ ಮೋದಿ ಜೊತೆ ಚರ್ಚಿಸಿದ ಮುಫ್ತಿ

By Web DeskFirst Published Oct 5, 2016, 1:10 PM IST
Highlights

ಜಮ್ಮು ಕಾಶ್ಮೀರ (ಸೆ.05): ಸರ್ಜಿಕಲ್ ದಾಳಿಯ ನಂತರ ಮೊದಲ ಬಾರಿಗೆ ಜಮ್ಮು ಕಾಶ್ಮೀರ ಸಿಎಂ ಮೆಹಬೂಬ ಮುಫ್ತಿ ಇಂದು ಪ್ರಧಾನಿ ಮೋದಿಯನ್ನು ಭೇಟಿ ಮಾಡಿ ಕಾಶ್ಮೀರದ ಸ್ಥಿತಿಗತಿ ಬಗ್ಗೆ ಚರ್ಚಿಸಿದರು.

ಪಾಕ್ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು ಇದರಿಂದ ಕಾಶ್ಮೀರದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮುಫ್ತಿ ಹೇಳಿದ್ದಾರೆ.

ಕಾಶ್ಮೀರದ ಕಾನೂನು ಸುವ್ಯವಸ್ಥೆ ಬಗ್ಗೆ ಪ್ರಧಾನಿ ಮೋದಿಗೆ ವಿವರ ಸಲ್ಲಿಸಿದರು. ರಾಜ್ಯದಲ್ಲಿ  ನಡೆಯುತ್ತಿರುವ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚಿಸಿದರು. ಸಂಕಷ್ಟದಲ್ಲಿರುವ ರಾಜ್ಯದ ಜನರಿಗೆ ಬೆಂಬಲ ನೀಡುತ್ತಿರುವುದಕ್ಕೆ ಮೋದಿಗೆ ಧನ್ಯವಾದಗಳನ್ನರ್ಪಿಸಿದ್ದಾರೆ.

click me!