ಸಿಎಂ ಸ್ಥಾನಕ್ಕೆ ಮೆಹಬೂಬಾ ರಾಜೀನಾಮೆ..!

First Published Jun 19, 2018, 3:43 PM IST
Highlights

ಸಿಎಂ ಸ್ಥಾನಕ್ಕೆ ಮೆಹಬೂಬಾ ಮುಫ್ತಿ ರಾಜೀನಾಮೆ

ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ ಮುಫ್ತಿ

ರಾಜ್ಯಪಾಲ ವೋಹ್ರಾಗೆ ರಾಜೀನಾಮೆ ಪತ್ರ ನೀಡಿದ ಮುಫ್ತಿ    

ಶ್ರೀನಗರ(ಜೂ.19): ಜಮ್ಮು ಮತ್ತು ಕಾಶ್ಮೀರದ ಬಿಜೆಪಿ-ಟಿಡಿಪಿ ಮೈತ್ರಿ ಸರ್ಕಾರ ಮುರಿದು ಬಿದ್ದಿದೆ. ಪಿಡಿಪಿಗೆ ನೀಡಿದ್ದ ಬೆಂಬಲವನ್ನು ಬಿಜೆಪಿ ಏಕಾಏಕಿ ಹಿಂಪಡೆದಿದೆ. ಈ ಹಿನ್ನೆಲೆಯಲ್ಲಿ ಸಿಎಂ ಮೆಹಬೂಬಾ ಮುಫ್ತಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬಿಜೆಪಿ ಮೈತ್ರಿ ಕಡಿದುಕೊಂಡ ಬಳಿಕ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ನರಿಂದರನಾಥ್ ವೋಹ್ರಾ ಅವರನ್ನು ಭೇಟಿಯಾದ ಮುಫ್ತಿ, ತಮ್ಮ ರಾಜೀನಾಂಎ ಪತ್ರವನ್ನು ಸಲ್ಲಿಸಿದರು. ಇದಕ್ಕೂ ಮೊದಲು ನವದೆಹಲಿಯಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್, ಕಣಿವೆಯಲ್ಲಿ ಶಾಂತಿ ಕಾಪಾಡುವಲ್ಲಿ ಮುಫ್ತಿ ವಿಫಲವಾಗಿದ್ದಾರೆ ಎಂದು ಆರೋಪಿಸಿದ್ದರು.

We have taken a decision, it is untenable for BJP to continue in alliance with PDP in Jammu & Kashmir, hence we are withdrawing: Ram Madhav, BJP pic.twitter.com/NWsmr7Io9e

— ANI (@ANI)

ಕೇಂದ್ರ ಸರ್ಕಾರದ ನಿರಂತರ ಬೆಂಬಲದ ಹೊರತಾಗಿಯೂ ಶಾಂತಿ ಮರುಸ್ಥಾಪನೆಗೆ ಮುಫ್ತಿ ಮುಂದಾಗಲಿಲ್ಲ ಎಂಬುದು ಬಿಜೆಪಿ ಆರೋಪವಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಸಾರ್ವಭೌಮತೆಯನ್ನು ಕಾಪಾಡುವ ಮತ್ತು ರಾಜ್ಯದ ಹಿತದೃಷ್ಟಿಯಿಂದ ಪಿಡಿಪಿಗೆ ನೀಡಿದ್ದ ಬೆಂಬಲ ಹಿಂಪಡೆಯಲಾಗಿದೆ ಎಂದು ಬಿಜೆಪಿ ತಿಳಿಸಿದೆ.

We will talk in detail at 5pm, meanwhile she (Mehbooba Mufti) has submitted her resignation (as J&K CM) to the Governor: Naeem Akhtar, PDP pic.twitter.com/w8vNI6XeRw

— ANI (@ANI)

ಬಿಜೆಪಿಯ ಈ ದಿಢೀರ್ ನಿರ್ಧಾರದಿಂದ ವಿಚಲಿತರಾದಂತೆ ಕಂಡು ಬಂದಿರುವ ಮಹಬೂಬಾ ಮುಫ್ತಿ, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಸದ್ಯ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

click me!