ಕಾವೇರಿಗೆ ಡ್ಯಾಂ ಆದ್ರೆ ತಮಿಳುನಾಡು ಪ್ರತ್ಯೇಕ ರಾಷ್ಟ್ರ

Published : Dec 10, 2018, 12:12 PM ISTUpdated : Dec 10, 2018, 12:13 PM IST
ಕಾವೇರಿಗೆ ಡ್ಯಾಂ ಆದ್ರೆ ತಮಿಳುನಾಡು ಪ್ರತ್ಯೇಕ ರಾಷ್ಟ್ರ

ಸಾರಾಂಶ

ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲು ಕರ್ನಾಟಕ ಸರ್ಕಾರ ಯೋಜನೆ ರೂಪಿಸುತ್ತಿದ್ದು ಇದಕ್ಕೆ ತಮಿಳುನಾಡು ಸರ್ಕಾರ ಮತ್ತೆ ಮತ್ತೆ ಖ್ಯಾತೆ ತೆಗೆಯುತ್ತಿದೆ. 

ತಿರುನೆಲ್ವೇಲಿ: ಕಾವೇರಿ ನದಿಗೆ ಅಡ್ಡಲಾಗಿ ಕರ್ನಾಟಕ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು ಅಣೆಕಟ್ಟೆ ಯೋಜನೆಗೆ ತಡೆಯೊಡ್ಡಲು ಒಂದೆಡೆ ತಮಿಳುನಾಡು ಸರ್ಕಾರ ಕಾನೂನು ಹೋರಾಟ ಆರಂಭಿಸಿದ್ದರೆ, ಮತ್ತೊಂದೆಡೆ ರಾಜಕೀಯ ನಾಯಕರು ನಾಲಗೆ ಹರಿಬಿಡಲು ಆರಂಭಿಸಿದ್ದಾರೆ.

ಒಂದು ವೇಳೆ ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದೇ ಆದಲ್ಲಿ ತಮಿಳುನಾಡು ಪ್ರತ್ಯೇಕ ರಾಷ್ಟ್ರ ವಾಗ ಬೇಕಾಗುತ್ತದೆ ಎಂದು ಪ್ರಚೋದನಾಕಾರಿ ಭಾಷಣಗಳಿಗೆ ಹೆಸರುವಾಸಿಯಾಗಿರುವ ಎಂಡಿಎಂಕೆ ನಾಯಕ ವೈಕೋ ಗುಡುಗಿದ್ದಾರೆ.

ಪುದುಕೋಟೆಯಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಮೇಕೆದಾಟು ವಿಚಾರದಲ್ಲಿ ಕೇಂದ್ರ ಸರ್ಕಾರ ಕರ್ನಾಟಕ ಪರ ಪಕ್ಷಪಾತ ಮಾಡುತ್ತಿದೆ. ನಮ್ಮ ಹಿತಾಸಕ್ತಿಯನ್ನು ಕೇಂದ್ರ ಕಾಯದಿದ್ದ ಮೇಲೆ ತಮಿಳುನಾಡು ಭಾರತದ ಭಾಗವಾಗಿರುವ ಅಗತ್ಯವಾದರೂ ಏನು ಎಂದು ಪ್ರಶ್ನಿಸಿದರು. 

ಮೇಕೆದಾಟು ಅಣೆಕಟ್ಟೆ ನಿರ್ಮಾಣದಿಂದ ತಮಿಳುನಾಡಿನಲ್ಲಿ 25 ಲಕ್ಷ ಎಕರೆ ಕೃಷಿ ಭೂಮಿ ನೀರಾವರಿಯಿಂದ ವಂಚಿತವಾಗಲಿದೆ. 5 ಕೋಟಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಆಗಲಿದೆ. ಇದರ ಜತೆಗೆ ಅಣೆಕಟ್ಟೆ ಸುರಕ್ಷತಾ ಮಸೂದೆ 2018 ಏನಾದರೂ ಅಂಗೀಕಾರವಾದರೆ ದೇಶದಲ್ಲೇ ಅತಿ ಹೆಚ್ಚು ಬಾಧೆಗೆ ಒಳಗಾಗುವ ರಾಜ್ಯ ತಮಿಳುನಾಡು ಆಗಲಿದೆ. ಆ ಮಸೂದೆ ಕಾಯ್ದೆಯಾದರೆ ಅಂತಾರಾಜ್ಯ ಜಲ ವಿವಾದಗಳು ಅರ್ಥ ಕಳೆದುಕೊಳ್ಳುತ್ತವೆ. ನ್ಯಾಯಾಧಿಕರಣಗಳ ಅಸ್ತಿತ್ವ ಕೊನೆಯಾಗುತ್ತದೆ. ಕರ್ನಾಟಕ ಹಾಗೂ ಕೇರಳದಿಂದ ನೀರು ಸಿಗದಂತಾಗುತ್ತದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್‌ ದೆವ್ವದ ಮನೆ, ದಿನಕ್ಕೊಂದು ಬಿಳಿ-ಕರಿ ದೆವ್ವ ಹೊರ ಬರ್ತಿವೆ: ಆರ್.ಅಶೋಕ್ ವ್ಯಂಗ್ಯ
ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯ ನಿಯಮ ಶೀಘ್ರ ಜಾರಿ: ಸಚಿವ ಶಿವರಾಜ ತಂಗಡಗಿ