
ಬೆಂಗಳೂರು (ಮಾ. 07): ನಮ್ಮ ಮೆಟ್ರೋ ಸಿಬ್ಬಂದಿ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಮಾರ್ಚ್ 22 ರಂದು ನಮ್ಮ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ.
ಮೆಟ್ರೋ ಆಡಳಿತ ಮಂಡಳಿಯಿಂದ ಕಿರುಕುಳ ಆರೋಪಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಕಳೆದ 8 ವರ್ಷಗಳಿಂದ ನೌಕರರ ಬೇಡಿಕೆ ಈಡೇರಿಸುವಲ್ಲಿ ವಿಫಲವಾಗಿರುವ BMRCL ಕಳೆದ ಜುಲೈನಲ್ಲಿ ಮೆಟ್ರೋ ಸಿಬ್ಬಂದಿ ಮುಷ್ಕರ ನಡೆಸಿದ್ದರು.
ಸರ್ಕಾರ ಎಸ್ಮಾ ಅಸ್ತ್ರ ಪ್ರಯೋಗಿಸಿ ಪ್ರತಿಭಟನಾಕಾರರನ್ನು ಹತ್ತಿಕ್ಕಿತ್ತು. ಎಸ್ಮಾಕ್ಕೆ ಹೆದರದೇ ಮಾರ್ಚ್ 22 ಕ್ಕೆ ಮೆಟ್ರೋ ಸಿಬ್ಬಂದಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಬೆಂಗಳೂರು ನಾಲ್ಕು ದಿಕ್ಕಿನಲ್ಲಿ 22 ರಂದು ಮೆಟ್ರೋ ಸೇವೆ ಸಂಚಾರ ಮಾಡೋದು ಬಹುತೇಕ ಅನುಮಾನ. ಬೆಳಗ್ಗೆ 5 ರಿಂದ ರಾತ್ರಿ 11 ಗಂಟೆಯವರಿಗೆ ಮೆಟ್ರೋ ಸಂಚಾರ ಸ್ಥಗಿತ ಸಾಧ್ಯತೆ ಇದೆ ಎಂದು ನಮ್ಮ ಮೆಟ್ರೋ ನೌಕರರ ಸಂಘದ ಅಧ್ಯಕ್ಷ ಸೂರ್ಯನಾರಾಯಣಮೂರ್ತಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.