Bengaluru Metro Alert: ಈ ನಿಲ್ದಾಣಗಳ ನಡುವೆ ಭಾನುವಾರ ಸೇವೆ ಸ್ಥಗಿತ!

Published : Mar 07, 2025, 07:25 PM ISTUpdated : Mar 07, 2025, 07:26 PM IST
Bengaluru Metro Alert: ಈ ನಿಲ್ದಾಣಗಳ ನಡುವೆ ಭಾನುವಾರ ಸೇವೆ ಸ್ಥಗಿತ!

ಸಾರಾಂಶ

ಹಳಿ ನಿರ್ವಹಣಾ ಕಾಮಗಾರಿಯಿಂದಾಗಿ ಭಾನುವಾರ ಮಾಗಡಿ ರಸ್ತೆ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ. ಬೆಳಗ್ಗೆ 7 ರಿಂದ 10 ಗಂಟೆಯವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಇರುವುದಿಲ್ಲ.

ಬೆಂಗಳೂರು (ಮಾ.7): ಹಳಿ ನಿರ್ವಹಣೆಯ ಕಾಮಗಾರಿ ಇರುವ ಕಾರಣ ಭಾನುವಾರ ಎರಡು ಪ್ರಮುಖ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ಪ್ರಕಟಣೆಯಲ್ಲಿ ತಿಳಿಸಿದೆ. 'ಹಳಿ ನಿರ್ವಹಣಾ ಕಾಮಗಾರಿ ನಿಮಿತ್ತ 09/03/2025  ರಂದು ಮಾಗಡಿ ರಸ್ತೆ ಮತ್ತು ಎಂ. ಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ಸೇವೆಯು ಭಾಗಶಃ ಸ್ಥಗಿತಗೊಳ್ಳಲಿದೆ' ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನಮ್ಮ ಮೆಟ್ರೋ ನಿಗಮವು ದಿನಾಂಕ 09.03.2025 (ಭಾನುವಾರ) ರಂದು ನೇರಳೆ ಮಾರ್ಗದಲ್ಲಿ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ರೈಲು ನಿಲ್ದಾಣಗಳ ನಡುವೆ ಹಳಿ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿದ್ದು ಬೆಳಿಗ್ಗೆ 07:00 ರಿಂದ 10:00 ಗಂಟೆಯವರೆಗೆ, (ಮೂರು ಗಂಟೆಗಳ ಕಾಲ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ಸೇವೆಗಳನ್ನು ಭಾಗಶಃ ರದ್ದುಪಡಿಸಲಾಗುತ್ತದೆ.

ಈ ರದ್ದತಿ ಅವಧಿಯಲ್ಲಿ ಕಬ್ಬನ್‌ ಪಾರ್ಕ್‌, ಡಾ.ಬಿಆರ್‌ ಅಂಬೇಡ್ಕರ್‌ ನಿಲ್ದಾಣ, ವಿಧಾನಸೌಧ, ಸರ್‌.ಎಂ.ವಿಶ್ವೇಶ್ವರಯ್ಯ ನಿಲ್ದಾಣ, ಸೆಂಟ್ರಲ್ ಕಾಲೇಜು, ನಾಡಪ್ರಭು ಕೆಂಪಗೌಡ ನಿಲ್ಯಾಣ, ಮೆಜೆಸ್ಟಿಕ್‌ (ನೇರಳೆ ಮಾರ್ಗ) ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಗಳನ್ನು ಮುಚ್ಚಲಾಗಿರುತ್ತದೆ.

ಬೆಳಗ್ಗೆ 10.00 ಗಂಟೆಯವರೆಗೆ ಈ ರದ್ದತಿಯ ಕಾರಣದಿಂದಾಗಿ, ಕ್ಯೂಆರ್ ಟಿಕೆಟ್‌ಗಳ ಖರೀದಿಯನ್ನು ನಿಷ್ಕ್ರಿಯಗೊಳಿಸಲಾಗುತ್ತದೆ. ನೇರಳೆ ಮಾರ್ಗ ದಲ್ಲಿನ ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್ ನಲ್ಲಿ ರೈಲು ಲಭ್ಯವಿರುವುದಿಲ್ಲವಾದ್ದರಿಂದ ನೇರಳ ಮಾರ್ಗದಿಂದ ಹಸಿರು ಮಾರ್ಗಕ್ಕೆ, ಮತ್ತು ಹಸಿರು ಮಾರ್ಗದಿಂದ ನೇರಳೆ ಮಾರ್ಗಕ್ಕೆ ಪ್ರಯಾಣಿಸಲು ಸಾರ್ವಜನಿಕರು ಕ್ಯೂಆರ್‌ ಟಿಕೆಟ್‌ ಮತ್ತು ಟೋಕನ್‌ಗಳನ್ನು ಖರೀದಿಸದಂತೆ ಸೂಚಿಸಲಾಗಿದೆ.

ನೇರಳೆ ಮಾರ್ಗದ ಇತರ ವಿಭಾಗಗಳಲ್ಲಿ ಅಂದರೆ, ಚಲಘಟ್ಟ ಮತ್ತು ಮಾಗಡಿ ರಸ್ತೆ ನಡುವೆ ಹಾಗೂ ಎಂಜಿ ರಸ್ತೆ ಮತ್ತು ವೈಟ್ ಫೀಲ್ಡ್ (ಕಾಡುಗೋಡಿ) ನಡುವೆ ರೈಲು ಸೇವೆಗಳು ಎಂದಿನಂತೆ ಬೆಳಿಗೆ, 07:00 ಗಂಟೆಗೆ ಪ್ರಾರಂಭವಾಗುತ್ತವೆ ಮತ್ತು ಮೇಲಿನ ಅವಧಿಯಲ್ಲಿ ವೇಳಾಪಟ್ಟಿಯ ಪ್ರಕಾರ ಲಭ್ಯವಿರುತ್ತವೆ.

ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ಉಪಕರಣ ಅಳವಡಿಕೆ ತಪಾಸಣೆ ಹೆಸರಲ್ಲಿ ನಿರ್ದೇಶಕ ಪತ್ನಿ ಜೊತೆ ವಿದೇಶ ಪ್ರವಾಸ: ತನಿಖೆಗೆ ಒತ್ತಾಯ

ಹಸಿರು ಮಾರ್ಗದಲ್ಲಿ ರೆಸ್ಟ್ ಸಂಸ್ಥೆ ಮತ್ತು ಮಾದಾವರ ಮೆಟ್ರೋ ನಿಲ್ದಾಣಗಳಿಂದ ರೈಲುಗಳ ಸೇವೆಗಳು ನಿಗದಿತ ಸಮತ ಬೆಳಗ್ಗೆ 7:00 ಗಂಟೆಗೆ ಪ್ರಾರಂಭವಾಗಲಿದೆ. ನಮ್ಮ ಮೆಟ್ರೋ ಪಯಾಣಿಕರು ಸದರಿ ಬದಲಾವಣೆಯನ್ನು ಗಮನಿಸಬೇಕೆಂದು ಕೋರಿದೆ. ಪ್ರಯಾಣಿಕರಿಗೆ ಇದರಿಂದಾಗುವ ಅನಾನುಕೂಲತಗೆ ವಿಷಾದಿಸಿದೆ.

ಬೆಂಗಳೂರು ಮೆಟ್ರೋಗೆ ಜಾಹೀರಾತು: ಬಾಡಿಗೆ ಸೇರಿ ಇನ್ನಿತರ ಮೂಲಗಳಿಂದ ₹100 ಕೋಟಿ ಆದಾಯ?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ