
ಬೆಂಗಳೂರು: ನಮ್ಮ ಮೆಟ್ರೋ ಮಾರ್ಗದ ರೈಲು ಹಳಿ ನಿರ್ವಹಣೆಯ ಕಾರಣದಿಂದ ಮಾ. 10ರ (ಶನಿವಾರ) ರಾತ್ರಿ ಸುಮಾರು 45 ನಿಮಿಷಗಳ ಮುಂಚಿತವಾಗಿ ರೈಲುಗಳ ಸಂಚಾರ ಸ್ಥಗಿತಗೊಳ್ಳಲಿದೆ.
ನಾಗಸಂದ್ರ, ಯಲಚೇನಹಳ್ಳಿ, ಬೈಯಪ್ಪನಹಳ್ಳಿ ಮತ್ತು ಮೈಸೂರು ರಸ್ತೆ ಟರ್ಮಿನಲ್ ನಿಲ್ದಾಣಗಳಿಂದ ಮೆಟ್ರೋ ಸಂಚಾರವನ್ನು ರಾತ್ರಿ 11 ಗಂಟೆಯ ಬದಲಾಗಿ ರಾತ್ರಿ 10.15ಕ್ಕೆ ಕೊನೆಯ ರೈಲು ಸಂಚರಿಸಲಿದೆ.
ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿನ ವಾಣಿಜ್ಯ ಕಾರ್ಯಾಚರಣೆ 45 ನಿಮಿಷಗಳ ಮುಂಚಿತವಾಗಿ ಸ್ಥಗಿತಗೊಳ್ಳಲಿದೆ. ಅಲ್ಲದೆ, ಮಾ.11ರಂದು (ಭಾನುವಾರ) ಬೆಳಗ್ಗೆ 8ರ ಬದಲಿಗೆ 10.30 ರಿಂದ ಟರ್ಮಿನಲ್ ನಿಲ್ದಾಣಗಳಿಂದ ಸಂಚಾರ ಪ್ರಾರಂಭಿಸಲಾಗುವುದು. ಈ ಹಿನ್ನೆಲೆಯಲ್ಲಿ ಮೆಟ್ರೋ ಸಂಚಾರದಲ್ಲಿನ ಸಮಯದ ಬದಲಾವಣೆಗೆ ಪ್ರಯಾಣಿಕರು ಸಹಕರಿಸಬೇಕು ಎಂದು ಬಿಎಂಆರ್‌ಸಿಎಲ್‌ನ ವ್ಯವಸ್ಥಾಪಕ ನಿರ್ದೇಶಕ ಮಹೇಂದ್ರ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.