
ಬೆಂಗಳೂರು(ಸೆ.19): ಬೆಂಗಳೂರಿಗರ ಕನಸಿನ ಯೋಚನೆ ನಮ್ಮ ಮೆಟ್ರೋ ಸಂಚಾರ, ಮುಂದಿನ ದಿನಗಳಲ್ಲಿ ಕೊಂಚ ದುಬಾರಿ ಪ್ರಯಾಣವಾಗಲಿದೆ. ಇನ್ನಾರು ತಿಂಗಳಲ್ಲಿ ಮೊದಲ ಹಂತದ ಪೂರ್ಣ ಕಾಮಗಾರಿ ಮುಗಿಸಲಿರುವ ನಮ್ಮ ಮೆಟ್ರೋ ನಿಗಮ ಪ್ರಯಾಣ ದರವನ್ನು ಹೆಚ್ಚಿಸುವ ಚಿಂತನೆ ನಡೆಸುತ್ತಿದೆ, ಈ ಬಗ್ಗೆ ಒಂದು ವರದಿ ಇಲ್ಲಿದೆ.
ನಮ್ಮ ಮೆಟ್ರೋ ಪ್ರಯಾಣ ದರ ಮುಂದಿನ ದಿನಗಳಲ್ಲಿ ಏರಿಕೆಯಾಗಲಿದೆ. ಮೆಟ್ರೋ ಮೊದಲ ಹಂತದ ಕಾಮಗಾರಿ 2016ರ ಕೊನೆಯ ತಿಂಗಳಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದ್ದು, ನಂತರ ದರವನ್ನು ಹೆಚ್ಚಿಸಲು ಬಿಎಂಆರ್‌ಸಿಎಲ್ ನಿರ್ಧರಿಸಿದೆ.
ಸದ್ಯ ಬೈಯಪ್ಪನಹಳ್ಳಿ-ಮೈಸೂರು ರಸ್ತೆ ಮತ್ತು ಸಂಪಿಗೆ ರಸ್ತೆ-ನಾಗಸಂದ್ರ ನಡುವೆ ನಮ್ಮ ಮೆಟ್ರೋ ರೈಲು ಸಂಚಾರ ನಡೆಸುತ್ತಿದು. ಬೈಯಪ್ಪನಹಳ್ಳಿ-ಮೈಸೂರು ರಸ್ತೆ ನೇರಳೆ ಮಾರ್ಗದಲ್ಲಿ ಪ್ರತಿನಿತ್ಯ 1.35 ಲಕ್ಷ ಪ್ರಯಾಣಿಕರು ಮತ್ತು ಸಂಪಿಗೆ ರಸ್ತೆ-ನಾಗಸಂದ್ರ ಮಾರ್ಗದಲ್ಲಿ 45 ಸಾವಿರ ಪ್ರಯಾಣಿಕರು ದಿನನಿತ್ಯ ಪ್ರಯಾಣಿಸುತ್ತಿದ್ದಾರೆ. ನಗರದಲ್ಲಿ ಮೆಟ್ರೋ ಸಂಚಾರ ಆರಂಭವಾದಾಗಿನಿಂದ ಇಲ್ಲಿವರೆಗೂ ದರ ಹೆಚ್ಚಳ ಮಾಡಿಲ್ಲ. ಈಗ ವಿದ್ಯುತ್ ಇತರ ಸೇವೆಗಳು ಮತ್ತು ವಿದ್ಯುತ್ ದರಗಳು ಹೆಚ್ಚಳವಾಗಿವೆ. ಆದ್ದರಿಂದ,ಮೆಟ್ರೋ ದರ ಹೆಚ್ಚಳಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ ಅಂತಾ ಮೆಟ್ರೋ ನಿಗಮದ ಅಧಿಕಾರಗಳು ತಿಳಿಸಿದ್ದಾರೆ.
ಸಧ್ಯದಲ್ಲಿ ಮೆಟ್ರೋ ದರ ಹೆಚ್ಚಳವಾಗದಿದ್ದರೂ ಮುಂದಿನ ದಿನಗಳಲ್ಲಿ ದರ ಏರಿಕೆ ಆಗಲಿದೆ. ಇನ್ನೂ ಮೆಟ್ರೋ ನಿಗಮದ ಈ ಚಿಂತನೆಗೆ ಪ್ರಯಾಣಿಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.