
ಕೊಯಮತ್ತೂರು: ಈ ವರ್ಷದ ಮುಂಗಾರು ಅವಧಿಯಲ್ಲಿ ಮಳೆ ಚೆನ್ನಾಗಿ ಸುರಿಯುತ್ತಿರುವುದರಿಂದ, ತಮಿಳುನಾಡಿನ ಮೆಟ್ಟೂರು ಅಣೆಕಟ್ಟು ಎರಡನೇ ಬಾರಿಗೆ ಗರಿಷ್ಠ ಮಟ್ಟವನ್ನು ತಲುಪಿದೆ.
ಕರ್ನಾಟಕದ ಜಲಾಶಯಗಳಿಂದ ಭಾರಿ ಹೆಚ್ಚುವರಿ ನೀರು ಹೊರಬಿಡುತ್ತಿರುವ ಹಿನ್ನೆಲೆಯಲ್ಲಿ ಜು.23ರ ಬಳಿಕ, ಇದೀಗ ಮತ್ತೊಮ್ಮೆ ಮೆಟ್ಟೂರು ಅಣೆಕಟ್ಟು ಅದರ ಗರಿಷ್ಠ ಸಾಮರ್ಥ್ಯ 120 ಅಡಿ ಭರ್ತಿಯಾಗಿದೆ.
ಸುಮಾರು 1.34 ಲಕ್ಷ ಕ್ಯುಸೆಕ್ ಒಳಹರಿವು ಇದ್ದಿದ್ದುದರಿಂದ ಶನಿವಾರ ಮಧ್ಯಾಹ್ನ 2 ಗಂಟೆಗೆ ಮೆಟ್ಟೂರು ಅಣೆಕಟ್ಟು ತುಂಬಿದೆ. ಕಾವೇರಿ ನದಿದಡ ಜಿಲ್ಲೆಗಳಲ್ಲಿ ಈಗಾಗಲೇ ಪ್ರವಾಹ ಮುನ್ನೆಚ್ಚರಿಕೆ ನೀಡಲಾಗಿತ್ತು. ನೀರು ಭರ್ತಿಯಾಗಿದ್ದರಿಂದ ಅಣೆಕಟ್ಟಿನ 16 ಗೇಟುಗಳನ್ನು ತೆರೆಯಲಾಗಿದೆ. ಅಣೆಕಟ್ಟಿನಿಂದ 1.10 ಲಕ್ಷ ಕ್ಯುಸೆಕ್ ಹೊರಬಿಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.