
ಮೆಕ್ಸಿಕೋ (ಡಿ.21): ಇಲ್ಲಿನ ಅತೀ ದೊಡ್ಡ ಪಟಾಕಿ ಮಾರುಕಟ್ಟೆಯಲ್ಲಿ ಸ್ಫೋಟ ಸಂಭವಿಸಿ 29 ಮಂದಿ ಸಾವನ್ನಪ್ಪಿದ್ದು 70 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮೆಕ್ಸಿಕೋದ ಟುಲ್ಟೆಪೆಕ್ ನಗರದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಕ್ರಿಸ್ ಮಸ್ ಹಾಗೂ ಹೊಸ ವರ್ಷಕ್ಕೆ ಪಟಾಕಿ ಖರೀದಿಸಲು ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು. ಈ ಸಂದರ್ಭದಲ್ಲಿ ಪಟಾಕಿ ಸರಣಿಗೆ ಆಕಸ್ಮಿಕ ಬೆಂಕಿ ತಗುಲಿ ಇಡೀ ಮಾರುಕಟ್ಟೆ ಭಸ್ಮವಾಗಿದೆ.
ಮೆಕ್ಸಿಕೋ ಅಧ್ಯಕ್ಷ ಎನ್ ರಿಕೋ ಪೀನಾ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದು ಗಾಯಾಳುಗಳು ಬೇಗ ಗುಣಮುಖರಾಗುವಂತೆ ಹಾರೈಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.