ಸೇನಾ ಕ್ಯಾಂಪ್ ಮೇಲೆ ದಾಳಿ; ಇಬ್ಬರು ಉಗ್ರರ ಹತ್ಯೆ

Published : Oct 06, 2016, 03:52 AM ISTUpdated : Apr 11, 2018, 12:43 PM IST
ಸೇನಾ ಕ್ಯಾಂಪ್ ಮೇಲೆ ದಾಳಿ; ಇಬ್ಬರು ಉಗ್ರರ ಹತ್ಯೆ

ಸಾರಾಂಶ

ಕುಪ್ವಾರ, ಜಮ್ಮು-ಕಾಶ್ಮೀರದ (ಅ.06): ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಉಗ್ರರು ಸೇನಾ ಕ್ಯಾಂಪ್ ನ್ನು ಗುರಿಯಾಗಿರಿಸಿಕೊಂಡು ದಾಳಿ ಮಾಡಿದ್ದಾರೆ.

ಇಂದು ಬೆಳಗ್ಗೆ 5 ಗಂಟೆ ವೇಳೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಸೇನಾ ಪಡೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.

ಉಗ್ರರ ಅಡಗುದಾಣಗಳನ್ನು ಶೋಧಿಸುತ್ತಿದ್ದ ಸೇನಾಪಡೆ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ದಾಳಿಯನ್ನು ಸೇನಾಪಡೆ ಸಮರ್ಥವಾಗಿ ಎದುರಿಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಸೇನಾ ಅಧಿಕಾರಿ ಪಿಟಿಐ ಗೆ ಮಾಹಿತಿ ನೀಡಿದ್ದಾರೆ.

ಬೆಳಿಗ್ಗೆ 5 ಗಂಟೆ ವೇಳೆಯಲ್ಲಿ ಮೊದಲ ಬಾರಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಉಗ್ರರನ್ನು ಪತ್ತೆ ಮಾಡುವುದಕ್ಕಾಗಿ ಸೇನಾ ಪಡೆ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ  6:30 ಕ್ಕೆ ಮತ್ತೊಮ್ಮೆ ಉಗ್ರರು ದಾಳಿ ನಡೆಸಿದ್ದಾರೆ.

ಸೇನಾ ಕ್ಯಾಂಪ್ ನ್ನು ಗುರಿಯಾಗಿರಿಸಿಕೊಂಡು ಉಗ್ರ ದಾಳಿ ನಡೆದಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಹೆಚ್ಚುವರಿ ಪಡೆಗಳನ್ನು ಕಳಿಸಲಾಗಿದೆ ಎಂದು ಸೇನಾ ಅಧಿಕಾರಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.  

ಪಾಕ್ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿ ಭಾರತೀಯ ಸೇನೆ ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ನಡೆಸಿ ಉಗ್ರರನ್ನು ಹತ್ಯೆ ಮಾಡಿದ ನಂತರ, ಕಾಶ್ಮೀರದಲ್ಲಿ ಸೇನಾ ಕ್ಯಾಂಪ್ ನ್ನು ಗುರಿಯಾಗಿರಿಸಿಕೊಂಡು ಉಗ್ರರು ನಡೆಸಿರುವ ಮೂರನೇ ದಾಳಿ ಯತ್ನ ಇದಾಗಿದೆ.

ಮೂರೂ ದಿನಗಳ ಹಿಂದೆ ಉಗ್ರರು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇನಾ ಕ್ಯಾಂಪ್ ನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಓರ್ವ ಬಿಎಸ್ ಎಫ್ ಯೋಧ ಹುತಾತ್ಮನಾಗಿದ್ದರು. 

(ಸಾಂದರ್ಭಿಕ ಚಿತ್ರ)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Discover Koppal: ವಿಶ್ವದ ಗಮನ ಸೆಳೆಯಲಿದೆ ಹಿರೇಬೆಣಕಲ್: ಡಿಸ್ಕವರ್ ಕೊಪ್ಪಳಕ್ಕೆ ಡಿಸಿ ವಿದ್ಯುಕ್ತ ಚಾಲನೆ
ಉತ್ತರಕನ್ನಡ: ಒಂದು ಎಕರೆ ಜಮೀನಿಗೆ ಹರಿದ ನೆತ್ತರು; ಕೋರ್ಟ್ ಮೆಟ್ಟಿಲೇರಿದ್ದಕ್ಕೇ ಪ್ರಾಣ ತೆಗೆದ ಪಾಪಿ!