
ಶ್ರೀನಗರ: ಕಾಶ್ಮೀರದಲ್ಲಿ ಉಗ್ರರ ಉಪಟಳ ಮುಂದುವರಿದಿದೆ. ಸೇನಾ ಪಡೆಗಳಲ್ಲಿ ಸ್ವಯಂಪ್ರೇರಿತ ಯೋಧ (ಟೆರಿಟೋರಿಯಲ್ ಆರ್ಮಿ ಜವಾನ್)ನಾಗಿ ಸೇವೆ ಸಲ್ಲಿಸುತ್ತಿದ್ದ ಯುವಕನೊಬ್ಬನನ್ನು ಅಪಹರಿಸಿರುವ ಉಗ್ರರು, ಆತನನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.
ಶೋಪಿಯಾನ್ ಜಿಲ್ಲೆಯಲ್ಲಿ ಆತನ ಶವ ಶನಿವಾರ ಪತ್ತೆಯಾಗಿದೆ. ದೇಹದ ತುಂಬೆಲ್ಲಾ ಗುಂಡು ಹೊಕ್ಕಿದ್ದು, ಆತನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.
ಇರ್ಫಾನ್ ಅಹಮದ್ ಉಗ್ರರ ಅಟ್ಟಹಾಸಕ್ಕೆ ಬಲಿಯಾದ ಯುವಕ. ವಾತ್ಮುಲ್ಲಾ ಕೀಗಂ ಪ್ರದೇಶದಲ್ಲಿರುವ ಹಣ್ಣಿನ ತೋಟವೊಂದರಲ್ಲಿ ಈತನ ದೇಹ ಪತ್ತೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.