ರೈತರ ಹಾಲು ದರ ಇಳಿಕೆ: ಪ್ರಸ್ತಾವ ಬಂದ್ರೆ ಪರಿಶೀಲನೆ

First Published Jun 3, 2018, 11:20 AM IST
Highlights

ಹಾಲಿನ ಉತ್ಪಾದನೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಹಾಲು ಹಾಗೂ ಇತರ ಉತ್ಪನ್ನಗಳ ಮಾರಾಟ ಕಡಿಮೆ ಆಗಿರುವುದರಿಂದ ರೈತರಿಗೆ ನೀಡುವ ಬೆಲೆಯಲ್ಲಿ ಸ್ವಲ್ಪ ಕಡಿಮೆ ಮಾಡುವಂತೆ ತಮಗೆ ಈವರೆಗೂ ಅಧಿಕೃತವಾಗಿ ಯಾವುದೇ ಪ್ರಸ್ತಾವನೆ ಬಂದಿಲ್ಲ. ಪ್ರಸ್ತಾವನೆ ಬಂದರೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದರು.

ಬೆಂಗಳೂರು: ಹಾಲಿನ ಉತ್ಪಾದನೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಹಾಲು ಹಾಗೂ ಇತರ ಉತ್ಪನ್ನಗಳ ಮಾರಾಟ ಕಡಿಮೆ ಆಗಿರುವುದರಿಂದ ರೈತರಿಗೆ ನೀಡುವ ಬೆಲೆಯಲ್ಲಿ ಸ್ವಲ್ಪ ಕಡಿಮೆ ಮಾಡುವಂತೆ ತಮಗೆ ಈವರೆಗೂ ಅಧಿಕೃತವಾಗಿ ಯಾವುದೇ ಪ್ರಸ್ತಾವನೆ ಬಂದಿಲ್ಲ. ಪ್ರಸ್ತಾವನೆ ಬಂದರೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದರು.

ಸುದ್ದಿಗಾರರ ಜತೆ ಅವರು ಮಾತನಾಡಿ, ರಾಜ್ಯದಲ್ಲಿ ಪ್ರಸ್ತುತ ಪ್ರತಿ ದಿನ 81-83 ಲಕ್ಷ ಲೀಟರ್‌ ಹಾಲಿನ ಉತ್ಪಾದನೆ ಆಗುತ್ತಿದೆ. ಆದರೆ ರಾಜ್ಯದ ಒಟ್ಟು ಬಳಕೆ ಸುಮಾರು 36 ಲಕ್ಷ ಲೀಟರ್‌ ಇದೆ. ಹೆಚ್ಚಿನ ಹಾಲನ್ನು ಎರಡು ಮೂರು ರಾಜ್ಯಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಮಕ್ಕಳಿಗೆ ಕ್ಷೀರ ಭಾಗ್ಯ ಯೋಜನೆ ಅಡಿ ಸಹ ಹಾಲು ನೀಡಲಾಗುತ್ತಿದೆ. ಹಾಲನ್ನು ಪುಡಿ ಮಾಡಿ ಮಾರಾಟ ಮಾಡುತ್ತಿದ್ದರೂ ಸಹ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಉಳಿಯುತ್ತಿದೆ. ಆದರೆ ರೈತರಿಗೆ ನೀಡುವ ಬೆಲೆಯಲ್ಲಿ ಕಡಿಮೆ ಮಾಡುವ ಬಗ್ಗೆ ಆಯಾ ಜಿಲ್ಲಾ ಕೆಎಂಎಫ್‌ ಅಂತಿಮ ನಿರ್ಧರಿಸಬೇಕಾಗುತ್ತದೆ ಎಂದು ತಿಳಿಸಿದರು.

click me!