
ಬೆಂಗಳೂರು (ಫೆ.15): ಕೇಂದ್ರ ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವ ಅನಂತಕುಮಾರ್ ಹೆಗಡೆ ಬುಧವಾರ ಮಧ್ಯಾಹ್ನ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ದಲಿತರ ಮನೆಯಲ್ಲಿ ಭೋಜನ ಸ್ವೀಕರಿಸಿದರು.
ಮುಂಡಗೋಡ ಪಟ್ಟಣಕ್ಕೆ ಜನೌಷಧಿ ಕೇಂದ್ರ ಉದ್ಘಾಟಿಸಲು ಆಗಮಿಸಿದ್ದ ಅವರು, ಮೊದಲು ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಡಾ.ಅಂಬೇಡ್ಕರ್ ಅವರ ಬಗ್ಗೆ ತಮಗೆ ಅಪಾರವಾದ ಗೌರವ ಇದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು. ಬಳಿಕ ಇಲ್ಲಿನ ಅಂಬೇಡ್ಕರ ಓಣಿಯಲ್ಲಿರುವ ಗಣಪತಿ ದೇವರಮನಿ ಹಾಗೂ ಪ್ರಕಾಶ ದೇವರಮನಿ ಅವರ ಮನೆಯಲ್ಲಿ ತರಕಾರಿ ಪಲ್ಲೆ, ರೊಟ್ಟಿ, ಸಿಹಿ ತಿನಿಸು ತಿನ್ನುವ ಮೂಲಕ ಭರ್ಜರಿ ಭೋಜನ ಮಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ವಿಧಾನಸಭೆ ವಿಪಕ್ಷ ನಾಯಕ ಜಗದೀಶ ಶೆಟ್ಟರ್, ಸಂಸದೆ ಶೋಭಾ ಕರಂದ್ಲಾಜೆ ಸೇರಿ ಬಿಜೆಪಿ ಪ್ರಮುಖ ನಾಯಕರು ಎರಡು ದಿನಗಳ ಹಿಂದೇ ಸ್ಲಂಗಳಲ್ಲಿ ವಾಸ್ತವ್ಯ ಮಾಡಿದ್ದರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.