ಕೋರ್ಟ್ ಕಟಕಟೆಯಲ್ಲಿ ಡಿ.ಕೆ.ಶಿವಕುಮಾರ್

Published : Sep 15, 2018, 11:38 AM ISTUpdated : Sep 19, 2018, 09:26 AM IST
ಕೋರ್ಟ್ ಕಟಕಟೆಯಲ್ಲಿ ಡಿ.ಕೆ.ಶಿವಕುಮಾರ್

ಸಾರಾಂಶ

ಇಂದು (ಶನಿವಾರ) ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್​ ಆರ್ಥಿಕ ಅಪರಾಧಗಳ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ಆದಾಯ ತೆರಿಗೆ ವಂಚನೆ ಆರೋಪದ ವಿಚಾರಣೆಗೆ ಡಿಕೆಶಿ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಆಗಮಿಸಿದ್ದಾರೆ.

ಬೆಂಗಳೂರು, (ಸೆ.15) ಇಂದು (ಶನಿವಾರ) ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್​ ಅವರು ಆರ್ಥಿಕ ಅಪರಾಧಗಳ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ಆದಾಯ ತೆರಿಗೆ ವಂಚನೆ ಆರೋಪದ ವಿಚಾರಣೆಗೆ ಸಂಬಂಧ  ಡಿಕೆಶಿ, ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಆಗಮಿಸಿದ್ದಾರೆ.

ಇದನ್ನು ಓದಿ: ಇ.ಡಿ.ಯಿಂದ ಡಿಕೆಶಿ ಬಂಧನವಾಗುತ್ತಾ..?

ಆರ್ಥಿಕ ಅಪರಾಧಗಳ ನ್ಯಾಯಾಲಯದ ಮುಂದೆ ಶನಿವಾರ ಕಡ್ಡಾಯವಾಗಿ ಹಾಜರಾಗಬೇಕೆಂದು ಡಿಕೆಶಿಗೆ ಆದಾಯ ತೆರಿಗೆ ಇಲಾಖೆ (ಐಟಿ) ನೋಟಿಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಶಿವಕುಮಾರ್ ಕೋರ್ಟ್ ಗೆ ಆಗಮಿಸಿದ್ದಾರೆ.

ಇದನ್ನು ಓದಿ: ಬಂಧನ ತಪ್ಪಿಸಲು ಡಿಕೆಶಿ ಮುಂದಿರುವ 2 ದಾರಿಗಳು

ದೆಹಲಿಯ ಹವಾಲಾ ಕೇಸ್ ನಲ್ಲಿ ಜಾಮೀನು ನೀಡುವಂತೆ ಡಿಕೆಶಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಇಂದು ಕೋರ್ಟ್ ವಿಚಾರಣೆ ನಡೆಸಲಿದೆ. ಇದ್ರಿಂದ ಡಿ.ಕೆ. ಶಿವಕುಮಾರ್ ನ್ಯಾಯಾಲದ ಮುಂದೆ ಹಾಜರಾಗಿದ್ದಾರೆ. ಯಾವುದೇ ಕಾರಣಕ್ಕೂ ಡಿಕೆ ಶಿವಕುಮಾರ್ ಗೆ ಜಾಮೀನು ಕೊಡದಂತೆ ಐಟಿ ಇಲಾಖೆ ಪರ ವಕೀಲ ಜೀವನ್ ವಾದ ಮಂಡನೆ ಮಾಡಲಿದ್ದಾರೆ.

ಕೋರ್ಟ್ ನಲ್ಲಿ ಏನೆಲ್ಲಾ ವಿಚಾರಣೆ ನಡೆಯಲಿದೆ ಎನ್ನುವುದನ್ನ ಕಾದು ನೋಡಬೇಕಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!
ಬೆಂಗಳೂರಲ್ಲಿ ಹೊಟ್ಟೆಪಾಡಿಗೆ ಕಳ್ಳತನ ಮಾಡ್ತಿದ್ದ ಕಳ್ಳನನ್ನೇ ರಾಬರಿ ಮಾಡಿದ ಖತರ್ನಾಕ್ ಕಿತಾಪತಿಗಳು!