
ರಾಮನಗರ: ಆದಾಯ ತೆರಿಗೆ ಇಲಾಖೆ ಯಿಂದ ನ್ಯಾಯಾಲಯದಲ್ಲಿ ದೂರು ದಾಖಲಾದ ಮಾತ್ರಕ್ಕೆ ಸಚಿವ ಡಿ.ಕೆ. ಶಿವಕುಮಾರ್ ಅವರ ರಾಜೀನಾಮೆ ಕೇಳುವ ಪ್ರಶ್ನೆ ಉದ್ಭವವಾಗುವುದಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ತಾಲೂಕಿನ ಪೇಟೆ ಕುರುಬರಹಳ್ಳಿಯ ಉದ್ಭವ ಆಂಜನೇಯಸ್ವಾಮಿ ಆಲಯ ಪ್ರತಿಷ್ಠಾನ ಹಾಗೂ ಮಹಾ ಕುಂಭಾಭಿಷೇಕ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತ್ತೊಮ್ಮೆ ಪ್ರಭಾವಿ ಕಾಂಗ್ರೆಸ್ ನಾಯಕನ ಪರವಾಗಿ ಬ್ಯಾಟಿಂಗ್ ನಡೆಸಿದರು.
ದೂರಿನ ವಿರುದ್ಧ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಕಾನೂನಿನ ಪ್ರಕಾರ ಹೋರಾಡುವ ಅವಕಾಶವಿದ್ದು, ಹೋರಾಟ ಮಾಡಲಿ ಎಂದು ಅವರು ಪುನರುಚ್ಚರಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.