ಡಿಕೆಶಿಗೆ ಐಟಿ ಶಾಕ್: ನಿವಾಸದ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

Published : Aug 02, 2017, 04:59 PM ISTUpdated : Apr 11, 2018, 12:49 PM IST
ಡಿಕೆಶಿಗೆ ಐಟಿ ಶಾಕ್: ನಿವಾಸದ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಸಾರಾಂಶ

ಇಂಧನ ಸಚಿವ ಡಿ ಕೆ ಶಿವಕುಮಾರ್ ಹಾಗೂ ಅವರ ಸಂಬಂಧಿಕರ ಮನೆ ಮೆಲೆ ಐಟಿ ದಾಳಿ ನಡೆದಿರುವುದನ್ನು ಖಂಡಿಸಿ ಅವರ ಬೆಂಬಲಿಗರು  ಸದಾಶಿವ ನಗರದಲ್ಲಿರುವ ನಿವಾಸದ ಮುಂದೆ ಪ್ರತಿಭಟನೆಗೆ ಮುಂದಾಗಿದ್ದು 100 ಜನರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಬೆಂಗಳೂರು (ಆ.02): ಇಂಧನ ಸಚಿವ ಡಿ ಕೆ ಶಿವಕುಮಾರ್ ಹಾಗೂ ಅವರ ಸಂಬಂಧಿಕರ ಮನೆ ಮೆಲೆ ಐಟಿ ದಾಳಿ ನಡೆದಿರುವುದನ್ನು ಖಂಡಿಸಿ ಅವರ ಬೆಂಬಲಿಗರು  ಸದಾಶಿವ ನಗರದಲ್ಲಿರುವ ನಿವಾಸದ ಮುಂದೆ ಪ್ರತಿಭಟನೆಗೆ ಮುಂದಾಗಿದ್ದು 100 ಜನರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಡಿಕೆ ಶಿವಕುಮಾರ್ ಬೆಂಬಲಿಗರು ನಿವಾಸದ ಮುಂದೆ ಪ್ರತಿಭಟನೆಗೆ ಮುಂದಾಗಿದ್ದು ಐಟಿ ದಾಳಿ ಕೇಂದ್ರ ಸರ್ಕಾರದ ಪ್ರಚೋದನೆ ಎಂದು ಕೇಂದ್ರದ ವಿರುದ್ಧ ಘೋಷಣೆ ಕೂಗಿದ್ದಾರೆ. ಅವರನ್ನೆಲ್ಲಾ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಇನ್ನು ಕೆಲವು ಕಾರ್ಯಕರ್ತರು ಶೇಷಾದ್ರಿಪುರಂನಲ್ಲಿರುವ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಅದೇ ರೀತಿ ರಾಮನಗರ, ಚಿತ್ರದುರ್ಗದಲ್ಲೂ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಯಲ್ಲಿ ಐಟಿ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡಾ ಐಟಿ ದಾಳಿಯನ್ನು ಖಂಡಿಸಿದ್ದಾರೆ. ಕೇಂದ್ರ ಸರ್ಕಾರ ತನ್ನ ಲಾಭಕ್ಕಾಗಿ ಐಟಿ ಇಲಾಖೆಯನ್ನು ಬಳಸಿಕೊಳ್ಳುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾದುದು. ಜನ ಇದನ್ನು ಮರೆಯುವುದಿಲ್ಲ. ಬಿಜೆಪಿಗೆ ಪಾಠ ಕಲಿಸುತ್ತಾರೆ ಎಂದು ಸಿಎಂ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನನಗೆ ಎಚ್ಚರಿಕೆ ಕೊಡೋ ಮುನ್ನ ಹುಷಾರ್, ಕಾಮನ್‌ಸೆನ್ಸ್ ಇಟ್ಟುಕೊಂಡು ಡೀಲ್ ಮಾಡಿ, ಪತ್ರ ಬರೆದವನಿಗೆ ಡಿಕೆಶಿ ವಾರ್ನಿಂಗ್!
5 ಸಾವಿರ ಕೊಡ್ತೀನಿ ರೂಮ್‌ಗೆ ಬಾ ಅಂದ್ರು? ಬ್ರಹ್ಮಾನಂದ ಗುರೂಜಿಯ ವಿಡಿಯೋ ವೈರಲ್