
ಬೆಂಗಳೂರು (ಡಿ.15): ಕಾಂಗ್ರೆಸ್ನಲ್ಲಿ ಮೇಟಿ ವಿಕೆಟ್ ಪತನವಾದ ಬೆನ್ನಲ್ಲೇ ಶೀಘ್ರದಲ್ಲಿಯೇ ಮತ್ತೊಂದು ವಿಕೇಟ್ ಬೀಳಲಿದೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಬಲವಾಗಿ ಕೇಳಿ ಬರುತ್ತಿವೆ.
ಅಕ್ರಮ ಹಣ ಸಂಗ್ರಹದ ಆರೋಪದಲ್ಲಿ ಬಂಧಿಯಾಗಿರುವ ಜಯಚಂದ್ರ ತನಿಖೆ ವೇಳೆ ಲೋಕೋಪಯೋಗಿ ಸಚಿವ ಎಚ್.ಸಿ. ಮಹದೇವಪ್ಪ ಅವರ ಹೆಸರು ಹೇಳಿದ್ದಾರೆ ಎನ್ನಲಾಗಿದ್ದು, ಪ್ರಕರಣ ಸಿಬಿಐಗೆ ವರ್ಗಾವಣೆಯಾದರೆ ಮಹದೇವಪ್ಪ ಕುರ್ಚಿಗೂ ಕಂಟಕ ಬರಲಿದೆ ಎಂಬ ಮಾತು ಕೇಳಿ ಬರುತ್ತಿದೆ.
ಜಯಚಂದ್ರನನ್ನು ವಶಕ್ಕೆ ಪಡೆದ ಇ.ಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾಗ ಜಯಚಂದ್ರ ಹಣದಲ್ಲಿ ಸಚಿವ ಸಚಿವ ಮಹದೇವಪ್ಪನವರ ಪಾಲು ಇದೆ ಎಂದು ಬಾಯಿಬಿಟ್ಟಿದ್ದಾನೆ.
ಹೀಗಾಗಿ ಸಿಬಿಐ, ಸಚಿವ ಮಹದೇವಪ್ಪ ಅವರನ್ನು ವಿಚಾರಣೆಗೆ ಕರೆಸುವ ಸಾಧ್ಯತೆ ಇದೆ. ಆ ಮುಜುಗರದಿಂದ ತಪ್ಪಿಸಿಕೊಳ್ಳಲು ಸಿಎಂ ಮಹದೇವಪ್ಪರಿಂದ ರಾಜೀನಾಮೆ ಪಡೆಯುವ ಪ್ರಸಂಗ ಎದುರಾಗಬಹುದು ಎನ್ನಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.