BSY ಪರ್ಸನಲ್ ಲೈಫ್ ಕೆದಕಿದ ಕುಮಾರಸ್ವಾಮಿಗೆ ಹಿಗ್ಗಾಮುಗ್ಗ ಜಾಡಿಸಿದ ರಾಮುಲು

Published : Sep 20, 2019, 08:50 PM IST
BSY ಪರ್ಸನಲ್ ಲೈಫ್ ಕೆದಕಿದ ಕುಮಾರಸ್ವಾಮಿಗೆ ಹಿಗ್ಗಾಮುಗ್ಗ ಜಾಡಿಸಿದ ರಾಮುಲು

ಸಾರಾಂಶ

ರಾಜಕೀಯ ಆರೋಪ-ಪ್ರತ್ಯಾರೋಪಗಳಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಖಾಸಗಿ ಜೀವನವನ್ನು ಕೆದಕಿರುವ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಸಚಿವ ಶ್ರೀರಾಮುಲು ಏಕವಚನದಲ್ಲಿ ಗುಡುಗಿದ್ದಾರೆ. 

ಬಾಗಲಕೋಟೆ, [ಸೆ.20]: ಮಾಜಿ ಸಿಎಂ ಕುಮಾರಸ್ವಾಮಿಗೆ ಅಧಿಕಾರ ಕಳೆದುಕೊಂಡು ಮತಿಭ್ರಮಣೆ ಆಗಿದೆ ಎಂದು ಸಚಿವ ಬಿ. ಶ್ರೀರಾಮುಲು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಯಡಿಯೂರಪ್ಪ ಅವರ ವೈಯಕ್ತಿಕ ವಿಚಾರವನ್ನು ಕೆದಕಿದ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿವ ಶ್ರೀರಾಮುಲು, ಅಧಿಕಾರ ಕಳೆದುಕೊಂಡು ಅವರಿಗೆ ಮತಿಭ್ರಮಣೆ ಆಗಿದೆ. ಅವರಿಗೆ ಯಡಿಯೂರಪ್ಪ ಕುಟುಂಬದವರನ್ನು ಟೀಕಿಸಲು ಯಾವ ನೈತಿಕತೆ ಇದೆ ಎಂದು ಗುಡುಗಿದರು.

ಮತ್ತೆ ಯಡಿಯೂರಪ್ಪ ಪರ್ಸನಲ್ ಲೈಫ್ ಕೆದಕಿದ HDK

ಯಡಿಯೂರಪ್ಪನವರ ಬಗ್ಗೆ, ಅವರ ಕುಟುಂಬದವರ ಬಗ್ಗೆ ಯಾರು ವೈಯಕ್ತಿಕ ಟೀಕೆ ಮಾಡಬಾರದು ಎಂದು ಕುಮಾರಸ್ವಾಮಿ ಸೇರಿದಂತೆ ಇತರರಿಗ ಎಚ್ಚರಿಕೆ ನೀಡಿದರು. 

ನೀವು ಒಬ್ಬ ಸಣ್ಣ ರಾಜಕಾರಣಿ. ನೀನೊಬ್ಬ ಹುಡುಗ. ಮಾಜಿ ಪ್ರಧಾನಮಂತ್ರಿ ಮಗ ಎಂಬ ಕಾರಣಕ್ಕೆ ಮುಖ್ಯಮಂತ್ರಿಯಾಗಿದ್ದೀರಿ. ಯಡಿಯೂರಪ್ಪ ಹೋರಾಟ ಮಾಡಿ ಮುಖ್ಯಮಂತ್ರಿಯಾಗಿದ್ದಾರೆ. ನಿಮ್ಮ ತಂದೆಗೆ ಇರುವಷ್ಟು ಅನುಭವ ಯಡಿಯೂರಪ್ಪನವರಿಗೆ ಇದೆ. ಕುಟುಂಬದವರನ್ನು ರಾಜಕಾರಣಕ್ಕೆ ಎಳೆದು ತರಬೇಡಿ ಎಂದು ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲಿ ಗುಡುಗಿದರು.

ಕುಮಾರಸ್ವಾಮಿ ಹೇಳಿದ್ದೇನು?
"ಒಂದಡಿಗೆ ಒಂದಡಿ ಇರುವ ನೀರಿನ ಟ್ಯಾಂಕ್ ನಲ್ಲಿ ಕಾಲು ಜಾರಿ ಬಿದ್ದು, ಸಾಯುವಂಥದ್ದು ಉಂಟೇನ್ರೀ? ಅಂಥದ್ದೇ ಜನ ಮೆಚ್ಚಿಕೊಂಡಿದ್ದಾರೆ. ಆ ರೀತಿ ಮಾಡಿದವರಿಗೆ ಕಾಲ ಇದು. ಅವರು ಇದೀಗ ದೇಶ ಕಾಯುವವರು, ರಾಜ್ಯ ಕಾಯುವವರು" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಶುಕ್ರವಾರ ರಾಮನಗರದಲ್ಲಿ ಹೇಳಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ