
ಬೆಂಗಳೂರು(ಆ. 01): ಸಚಿವ ಟಿ.ಬಿ.ಜಯಚಂದ್ರ ವಿರುದ್ಧ ಭೂಕಬಳಿಕೆಯ ಆರೋಪ ಕೇಳಿಬಂದಿದೆ. ಮಳವಳ್ಳಿ ಚಿಕ್ಕಣ್ಣ ಚಾರಿಟೀಸ್ ಟ್ರಸ್ಟ್ ಮೂಲಕ ಸರಕಾರಿ ಕೆರೆ ಅತಿಕ್ರಮಣ ಮಾಡಿದ್ದಾರೆಂದು ಜಯಚಂದ್ರ ವಿರುದ್ಧ ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿಗೌಡರು ದೂರು ದಾಖಲಿಸಿದ್ದಾರೆ.
ಬೆಂಗಳೂರು ಉತ್ತರ ತಾಲೂಕಿನ ಯಶವಂತಪುರ ಹೋಬಳಿಯ ಉಲ್ಲಾಳದಲ್ಲಿ 24 ಎಕರೆ 12 ಗುಂಟೆಯಷ್ಟು ವಿಸ್ತೀರ್ಣವಿರುವ ಸರಕಾರಿ ಕೆರೆಯಲ್ಲಿ 15ಗುಂಟೆಯಷ್ಟು ಜಮೀನನ್ನು ಅತಿಕ್ರಮಣ ಮಾಡಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ಹಾಸ್ಟೆಲ್ ನಿರ್ಮಿಸಲೆಂದು 15 ಗುಂಟೆ ಪ್ರದೇಶವನ್ನು ಒತ್ತುವರಿ ಮಾಡಿಕೊಂಡು ಕಾಂಪೌಂಡ್ ನಿರ್ಮಿಸಲಾಗಿದೆ.
ಒತ್ತುವರಿ ಆರೋಪ ಎದುರಿಸುತ್ತಿರುವ ಮಳವಳ್ಳಿ ಚಿಕ್ಕಣ್ಣ ಚಾರಿಟೀಸ್ ಟ್ರಸ್ಟ್'ನಲ್ಲಿ ಟಿಬಿ ಜಯಚಂದ್ರ ಅವರು ಮ್ಯಾನೇಜಿಂಗ್ ಟ್ರಸ್ಟಿಯಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.