
ಮಂಗಳೂರು(ಸೆ.23): ಲೇಖಕ ಹಾಗೂ ಚಿಂತಕ ಚಕ್ರವರ್ತಿ ಸೂಲಿಬೆಲೆಯವರನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ಅವರು ತಮ್ಮ ಭಾಷಣದಲ್ಲಿ ಕೀಳುಮಟ್ಟದಲ್ಲಿ ವ್ಯಂಗ್ಯವಾಡಿದ್ದು,ಈ ದೃಶ್ಯ ಸಾಮಾಜಿಕ ಜಾಲತಣಗಳಲ್ಲಿ ವೈರಲ್ ಆಗಿದೆ.
ಜಿಲ್ಲೆಯ ಅಸೈಗೋಳದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ತುಳು ಭಾಷೆಯಲ್ಲಿ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಸಚಿವರು, ಸೂಲಿಬೆಲೆನಾ ಸೂಲೆಬೆಲೆನಾ ಎಂದು ಮತ್ತೆ ಮತ್ತೆ ಸಭಿಕರನ್ನು ಕೇಳಿ ವ್ಯಂಗ್ಯವಾಡಿದ್ದಾರೆ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಸಚಿವರು ಈ ರೀತಿಯ ಪದ ಬಳಕೆಗೆ ಹಲವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.